Publish Date: Wed, 02 Aug 2023 (21:20 IST)
Updated Date: Wed, 02 Aug 2023 (21:02 IST)
ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಮಾಡಲಾಗಿತ್ತು ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿ ಬೆಳ್ಳಿಯಪ್ಪ ನೇತೃತ್ವದಲ್ಲಿ ತನಿಖೆ ತೀವ್ರಗೊಂಡಿದ್ದು, ಆರೋಪಿತರ ಸ್ನೇಹಿತರ ಮೊಬೈಲ್ಗಳನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಪೊಲೀಸರ ತಂಡ ಮೊಬೈಲ್ಗಳನ್ನು ಪರಿಶೀಲನೆ ನಡೆಸುತ್ತಿದೆ. ಇನ್ನು ಕಳೆದ ವಾರ ಮಳೆಯ ಕಾರಣಕ್ಕೆ ಕಾಲೇಜಿಗೆ ರಜೆ ಇತ್ತು. ಇದೀಗ ಮಳೆ ಕಡಿಮೆಯಾದ ಹಿನ್ನೆಲೆ ಸೋಮವಾರದಿಂದ ಕಾಲೇಜು ಆರಂಭವಾಗಬೇಕಿತ್ತು. ಆದರೆ ಕಾಲೇಜಿನ ಶೈಕ್ಷಣಿಕ ವಾತಾವರಣ ಕೆಡಬಾರದೆಂದು ಅನಿರ್ದಿಷ್ಟಾವಧಿಗೆ ರಜೆ ಮುಂದುವರಿಸಿ ಕಾಲೇಜು ಆಡಳಿತ ಮಂಡಳಿ ಆದೇಶ ಹೊರಡಿಸಿದೆ. ಪ್ರಕರಣದಲ್ಲಿ ತನಿಖಾಧಿಕಾರಿ ಬದಲಾಗುತ್ತಿದ್ದಂತೆಯೇ ತನಿಖೆ ಚುರುಕುಗೊಂಡಿದೆ, ಪೊಲೀಸರು ಆರೋಪಿಗಳ ಫ್ರೆಂಡ್ಸ್ ಫೋನ್ ವಶಕ್ಕೆ ಪಡೆದಿದ್ದಾರೆ.