Publish Date: Sun, 06 Nov 2022 (10:51 IST)
Updated Date: Sun, 06 Nov 2022 (10:53 IST)
ಬೆಂಗಳೂರು : ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ ದಲ್ಲಿ ಒಟ್ಟು 9,81,784 ಕೋಟಿ ರೂ. ಬಂಡವಾಳ ಹೂಡಿಕೆ ಒಪ್ಪಂದವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ಆರ್. ನಿರಾಣಿ ತಿಳಿಸಿದ್ದಾರೆ.
ಜಾಗತಿಕ ಹೂಡಿಕೆದಾರರ ಸಮಾವೇಶದ ವಿವರಗಳನ್ನು ಹಂಚಿಕೊಳ್ಳಲು ಶನಿವಾರ ನಗರದ ಖಾಸಗಿ ಹೋಟೆಲ್ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಚಿವರು,
ಸಮಾವೇಶದಲ್ಲಿ ಒಟ್ಟು 9,81,784 ಕೋಟಿ ರೂ. ಬಂಡವಾಳ ಹೂಡಿಕೆ ಒಪ್ಪಂದವಾಗಿದೆ. ಈ ಪೈಕಿ ಶೇ.90ಕ್ಕೂ ಹೆಚ್ಚು ಯೋಜನೆಗಳು ಬೆಂಗಳೂರಿನ ಆಚೆ ಅನುಷ್ಠಾನಗೊಳ್ಳುತ್ತಿದೆ ಎಂದು ಅವರು ಹೇಳಿದರು.
ಮೂರು ದಿನಗಳ ಸಮಾವೇಶದಲ್ಲಿ ಒಟ್ಟು 9,81,784 ಕೋಟಿ ರೂ. ಬಂಡವಾಳ ಹೂಡಿಕೆ ಒಪ್ಪಂದವಾಗಿದ್ದು, ಈ ಪೈಕಿ ಲಕ್ಷ ಕೋಟಿ ರೂ. ಮೊತ್ತದ 68 ಯೋಜನೆಗಳಿಗೆ ಈಗಾಗಲೇ ಅನುಮೋದನೆ ನೀಡಲಾಗಿದೆ.