Select Your Language

Notifications

webdunia
webdunia
webdunia
Saturday, 12 April 2025
webdunia

ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

ವಿವಿಧ ಹುದ್ದೆಗೆ ಅರ್ಜಿ ಆಹ್ವಾನ
bangalore , ಗುರುವಾರ, 3 ಫೆಬ್ರವರಿ 2022 (21:13 IST)
ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಡಿ ಜಿಲ್ಲಾ ಮಟ್ಟದ ಕಾರ್ಯಕ್ರಮ ಸಹಾಯಕರು ಮತ್ತು ಪೋಷಣ್ ಅಭಿಯಾನ ಯೋಜನೆಯಡಿ ತಾಲ್ಲೂಕು ಯೋಜನಾ ಸಹಾಯಕರ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ. 
ಜಿಲ್ಲಾ ಮಟ್ಟದ ಕಾರ್ಯಕ್ರಮ ಸಹಾಯಕರ ಹುದ್ದೆಗೆ ಬಿ.ಎ., ಬಿ.ಕಾಂ, ಸಮಾಜ ಕಾರ್ಯ, ರೂರಲ್ ಮ್ಯಾನೇಜ್‍ಮೆಂಟ್ ಇವುಗಳಲ್ಲಿ ಯಾವುದಾದರೊಂದು ಪದವಿ ಪಡೆದಿರಬೇಕು. 
ಸರ್ಕಾರಿ, ಸ್ವಯಂ ಸೇವಾ ಸಂಸ್ಥೆಗಳಲ್ಲಿ ಕನಿಷ್ಠ 1 ವರ್ಷ ಕೆಲಸ ನಿರ್ವಹಿಸಿರುವ ಅನುಭವ ಹೊಂದಿರಬೇಕು. ಡಾಟಾ ಎಂಟ್ರಿ, ಎಂ.ಎಸ್.ಆಫೀಸ್ ಬಳಕೆಯಲ್ಲಿ ಪ್ರಾವೀಣ್ಯತೆ ಹೊಂದಿರಬೇಕು. ಮಾಹೆಯಾನ ರೂ. 20 ಸಾವಿರ ಗೌರವಧನ ನೀಡಲಾಗುವುದು. 
ತಾಲ್ಲೂಕು ಯೋಜನಾ ಸಹಾಯಕರ ಹುದ್ದೆಗೆ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದಿರಬೇಕು. ಸ್ಥಳೀಯ ಸಂಸ್ಥೆಗಳೊಂದಿಗೆ ಕನಿಷ್ಠ 1 ವರ್ಷ ಕೆಲಸ ನಿರ್ವಹಿಸಿದ ಅನುಭವ, ಕನ್ನಡ ಭಾಷೆಯಲ್ಲಿ ಪ್ರಾವೀಣ್ಯತೆ, ಕ್ಷೇತ್ರ ಕಾರ್ಯ ನಿರ್ವಹಣೆ ಮತ್ತು ಸ್ಥಳೀಯ ಅಭ್ಯರ್ಥಿ ಕಡ್ಡಾಯ. ಮಾಹೆಯಾನ ರೂ.15 ಸಾವಿರ ಗೌರವಧನ ನೀಡಲಾಗುವುದು. 
ನೇಮಕಾತಿಯು 11 ತಿಂಗಳ ಅವಧಿಯಾಗಿದ್ದು, ಕೆಲಸ ನಿರ್ವಹಣೆಯ ಆಧಾರದ ಮೇರೆಗೆ ನವೀಕರಿಸಲಾಗುವುದು. ಅರ್ಹ ಅಭ್ಯರ್ಥಿಗಳು ಸ್ವ ವಿವರಗಳೊಂದಿಗೆ ನಿಗದಿಪಡಿಸಿದ ವಿದ್ಯಾರ್ಹತೆಯ ಅಂಕಪಟ್ಟಿಗಳು ಮತ್ತು ಅನುಭವ ಪ್ರಮಾಣ ಪತ್ರಗಳೊಂದಿಗೆ ಫೆಬ್ರವರಿ, 15 ರ ಸಂಜೆ 5 ಗಂಟೆಯೊಳಗೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್‍ಗೇಟ್ ಹತ್ತಿರ, ಮೈಸೂರು ರಸ್ತೆ, ಮಡಿಕೇರಿ (ದೂ.ಸಂ.08272-298379) ಇಲ್ಲಿಗೆ ಖುದ್ದಾಗಿ ಸಲ್ಲಿಸುವಂತೆ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಮುದ್ದಣ್ಣ ಅವರು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸ್ವಚ್ಚ ನಗರ :ಸಲಹೆ ಮಾರ್ಗದರ್ಶನಕ್ಕೆ ಮನವಿ