Webdunia - Bharat's app for daily news and videos

Install App

ರಾಜ್ಯದ ಯಶೋಗಾಥೆಯಲ್ಲಿ ಭಾಗಿಯಾಗಿ: ಹೂಡಿಕೆದಾರರಿಗೆ ಮುಖ್ಯಮಂತ್ರಿ ಆಹ್ವಾನ

Webdunia
ಬುಧವಾರ, 25 ಮೇ 2022 (19:21 IST)
ಬಂಡವಾಳ ಹೂಡಿಕೆ ಸಂಸ್ಥೆಗಳನ್ನು ಕರ್ನಾಟಕ ತೆರೆದ ಮನಸ್ಸಿನಿಂದ ಸ್ವಾಗತಿಸುತ್ತದೆ. ರಾಜ್ಯವನ್ನು ಸಮೃದ್ಧಿಗೊಳಿಸುವ ಜೊತೆಗೆ ಸಂಸ್ಥೆಗಳ ಪರಿಶ್ರಮಕ್ಕೆ ಸಾರ್ಥಕತೆಯನ್ನು ಪಡೆದು, ರಾಜ್ಯದ ಯಶೋಗಾಥೆಯಲ್ಲಿ ಭಾಗಿಗಳಾಗಿರಿ ಎಂದು ವಿಶ್ವದ ಪ್ರಮುಖ ಸಂಸ್ಥೆಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದರು.
 
 
ದಾವೋಸ್ ನಲ್ಲಿ ಜರುಗಿದ ವಿಶ್ವ ಆರ್ಥಿಕ ಶೃಂಗ ಸಭೆಯ ಸಂದರ್ಭದಲ್ಲಿ ಕರ್ನಾಟಕದ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶದ ಲಾಂಚ್ ಇವೆಂಟ್ ನಲ್ಲಿ ಅವರು ಮಾತನಾಡಿದರು.
 
 ನವೆಂಬರ್  ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆಯುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಹಾಗೂ ಬೆಂಗಳೂರು ಟೆಕ್ ಸಮ್ಮಿಟ್ ನಲ್ಲಿ ಪಾಲ್ಗೊಳ್ಳುವಂತೆ ಹೂಡಿಕೆದಾರರಿಗೆ ಅವರು ಆಹ್ವಾನ ನೀಡಿದರು.
 
 
ಕರ್ನಾಟಕದಲ್ಲಿ  ಕೈಗಾರಿಕೆ ಹಾಗೂ ಉದ್ಯಮಗಳ ಸ್ಥಾಪನೆಗೆ ಪೂರಕವಾಗಿ ಎರಡು ನೀತಿಗಳನ್ನು ಜಾರಿಗೆ ತರಲಾಗುತ್ತಿದೆ. ಸಂಶೋಧನೆಗೆ ಹೆಚ್ಚು ಪ್ರೋತ್ಸಾಹವನ್ನು ನೀಡುವ ಆರ್ ಎಂಡ್ ಡಿ ಪಾಲಿಸಿ, ಹೆಚ್ಚು ಉದ್ಯೋಗವನ್ನು ಒದಗಿಸುವ ಉದ್ಯಮಗಳಿಗೆ ಹೆಚ್ಚು ಪ್ರೋತ್ಸಾಹಕಗಳನ್ನು ನೀತಿಗಳನ್ನು ಜಾರಿಗೆ ತರಲಾಗಿದೆ. ಈ ಎರಡೂ ನೀತಿಗಳ ಲಾಭಗಳನ್ನು ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡುವ ಸಂಸ್ಥೆಗಳು ಪಡೆದುಕೊಳ್ಳಬಹುದಾಗಿದೆ ಎಂದರು.
 
 
ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿಯವರು ಸ್ವತ: ಉದ್ಯಮಿಯಾಗಿದ್ದು, ದೊಡ್ಡ ಪ್ರಮಾಣದಲ್ಲಿ ಸಕ್ಕರೆ ಉತ್ಪಾದನೆಯ ಜೊತೆಗೆ ಎಥನಾಲ್ ಉತ್ಪಾದನೆಗೂ ಹೆಚ್ಚಿನ ಪ್ರಾಶಸ್ತ್ಯ ನೀಡಿದ್ದಾರೆ. ಇಂತಹ ಸಾಧಕರು  ಕೈಗಾರಿಕಾ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.  
 
ಉನ್ನತ ಶಿಕ್ಷಣ, ಐಟಿಬಿಟಿ ಸಚಿವ ಅಶ್ವತ್ಥನಾರಾಯಣ ಹಾಗೂ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿಯಂತಹ ದಕ್ಷ ಸಚಿವರ ಸಹಕಾರದೊಂದಿಗೆ ರಾಜ್ಯದಲ್ಲಿ ಕೈಗಾರಿಕಾ ಅಭಿವೃದ್ಧಿಯನ್ನು ತರಲಾಗುತ್ತಿದೆ ಎಂದರು.
 
 
ಇದೇ ಸಂದರ್ಭದಲ್ಲಿ ಮಾತನಾಡಿದ  ಉನ್ನತ ಶಿಕ್ಷಣ, ಐಟಿ ಬಿಟಿ ಸಚಿವ ಅಶ್ವತ್ಥ ನಾರಾಯಣ ಅವರು, ಕರ್ನಾಟಕದಲ್ಲಿ ಕಾರ್ಮಿಕ ನೀತಿ, ಭೂಮಿ  ಹಾಗೂ ಲೈಸೆನ್ಸ್ ಗಳನ್ನು ಪಡೆಯುವ ಸರಳ ಪ್ರಕ್ರಿಯೆಗಳ ಮೂಲಕ ಈಸ್ ಆಫ್ ಡೂಯಿಂಗ್ ಬಿಸನೆಸ್ ನೀಡುವುದು ಕರ್ನಾಟಕ ಸರ್ಕಾರಕ್ಕೆ ಆದ್ಯತೆಯ ವಿಷಯವಾಗಿದೆ. ಕರ್ನಾಟಕ , ಅದರಲ್ಲಿಯೂ ಬೆಂಗಳೂರು ನಗರ ಎಲ್ಲ ರಂಗಗಳ ಸಂಶೋಧನಾ ಕಾರ್ಯಗಳಿಗೆ ಕೇಂದ್ರವಾಗಿದೆ. ಬಹಳಷ್ಟು ಯೂನಿಕಾರ್ನ್ಗಳು, ಡೆಕಾಕಾರ್ನಾಗಳು ಬೆಂಗಳೂರಿನಲ್ಲಿದೆ.  ಕರ್ನಾಟಕ ಮಾನವೀಯ ಮೌಲ್ಯಗಳು, ಕಾಸ್ಮೊಪಾಲಿಟನ್ ಚಿಂತನೆ ಹಾಗೂ ಸಂಸ್ಕೃತಿ ವೈವಿಧ್ಯತೆಗಳಿಂದ ಕೂಡಿದೆ.  ಆವಿಷ್ಕಾರ ಹಾಗೂ ಸಂಶೋಧನೆಗಳಿಗೆ ಹೆಚ್ಚು ಒತ್ತು ನೀಡಲಾಗುತ್ತದೆ. ಬೆಂಗಳೂರು ಟೆಕ್ ಸಮಿಟ್, ಜಾಗತಿಕ ಹೂಡಿಕೆದಾರರ ಸಮಾವೇಶವನ್ನು  ನವೆಂಬರ್ ನಲ್ಲಿ ಆಯೋಜಿಸಲಾಗುತ್ತಿದೆ. ಕೈಗಾರಿಕೆಗಳೂ ಸೇರಿದಂತೆ ಎಲ್ಲ ವಲಯಗಳಿಗೂ ನೀತಿಗಳನ್ನು ರೂಪಿಸಲಾಗಿದೆ. ರಾಜ್ಯದಲ್ಲಿ ಸ್ಟಾರ್ಟ್ ಅಪ್ಗಳಿಗೆ ಆರ್ಥಿಕ ಸಹಾಯ, ಪ್ರೋತ್ಸಾಹಕಗಳನ್ನು ಸರ್ಕಾರ ಒದಗಿಸುತ್ತಿದೆ. ರಾಜ್ಯದಲ್ಲಿ ಬಂಡವಾಳ ಹೂಡುವ ಉದ್ಯಮಗಳು, ಕೈಗಾರಿಕೆಗಳಿಗೆ ಸರ್ಕಾರ ಎಲ್ಲ ಸಹಕಾರವನ್ನು ನೀಡಲಿದೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments