Publish Date: Fri, 09 Nov 2018 (19:10 IST)
Updated Date: Fri, 09 Nov 2018 (19:12 IST)
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿರುವ ಟಿಪ್ಪು ಸುಲ್ತಾನ್ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪಾಲ್ಗೊಳ್ಳುವುದು ಅನುಮಾನ ಮೂಡಿಸಿದೆ.
ಟಿಪ್ಪು ಜಯಂತಿ ಸಮಾರಂಭದಲ್ಲಿ ಭಾಗವಹಿಸುವುದರಿಂದ ಉಂಟಾಗುವ ಮುಜುಗರದಿಂದ ಪಾರಾಗಲು ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿಶ್ರಾಂತಿ ಪಡೆದುಕೊಳ್ಳುವುದಕ್ಕೆ ಮುಂದಾಗಿದ್ದಾರೆ.
ಜೆಡಿಎಸ್ ಅಧಿಕಾರಕ್ಕೆ ಬಂದಲ್ಲಿ ಟಿಪ್ಪು ಜಯಂತಿ ಆಚರಿಸುವುದಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಈ ಹಿಂದೆ ಹೇಳಿಕೆ ನೀಡಿದ್ದರು. ಹಾಗಾಗಿ ಸಮಾರಂಭದಿಂದ ದೂರ ಉಳಿಯಲು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.
ವೈದ್ಯರ ಸಲಹೆ ಮೇರೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಕುಟುಂಬದ ಸದಸ್ಯರೊಂದಿಗೆ ವಿಶ್ರಾಂತಿ ಪಡೆಯಲು ಮೈಸೂರಿಗೆ ತೆರಳಿದ್ದಾರೆ ಎನ್ನಲಾಗಿದೆ.