Select Your Language

Notifications

webdunia
webdunia
webdunia
webdunia

IPS Harsh Vardhan: ಅಧಿಕಾರ ಸ್ವೀಕರಿಸಲು ತೆರಳುವಾಗಲೇ ಅಪಘಾತದಲ್ಲಿ ಮಡಿದ ಐಪಿಎಸ್ ಹರ್ಷವರ್ಧನ್

Harsh Vardhan IPS

Krishnaveni K

ಹಾಸನ , ಸೋಮವಾರ, 2 ಡಿಸೆಂಬರ್ 2024 (10:48 IST)
ಹಾಸನ: ನಮ್ಮ ದೇಶದಲ್ಲಿ ಐಪಿಎಸ್, ಐಎಎಸ್ ಅಧಿಕಾರಿ ಆಗಬೇಕೆಂದು ಎಷ್ಟೋ ಜನರು ಕನಸು ಕಾಣುತ್ತಾರೆ. ಅದಕ್ಕಾಗಿ ಪರಿಶ್ರಮ ಪಡುತ್ತಾರೆ. ಅಂತಹದ್ದೇ ಕನಸು ಹೊತ್ತು ಇನ್ನೇನು ಅಧಿಕಾರ ಸ್ವೀಕರಿಸಬೇಕು ಎನ್ನುವಷ್ಟರಲ್ಲಿ ಜೀವವೇ ಹೋದರೆ ಅದಕ್ಕಿಂತ ದೊಡ್ಡ ದುರಂತ ಇನ್ನೇನಾದರೂ ಇದೆಯೇ?

ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಅವರದ್ದೂ ಅದೇ ದುರಂತ ಕತೆಯಾಗಿದೆ. ಹಾಸನ-ಮೈಸೂರು ಹೆದ್ದಾರಿಯ ಕಿತ್ತಾನೆ ಗಡಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐಪಿಎಸ್ ಪ್ರೊಬೆಷನರಿ ಅಧಿಕಾರಿಯಾಗಿದ್ದ ಹರ್ಷವರ್ಧನ್ ಇಹಲೋಕ ತ್ಯಜಿಸಿದ್ದಾರೆ. ಹರ್ಷವರ್ಧನ್ ಗೆ ಕೇವಲ 26 ವರ್ಷ ವಯಸ್ಸಾಗಿತ್ತು.

2023-24 ನೇ ಐಪಿಎಸ್ ಬ್ಯಾಚ್ ನಲ್ಲಿ ಉತ್ತೀರ್ಣರಾಗಿ ಕರ್ನಾಟಕ ಕೇಡರ್ ನಲ್ಲಿ ಆಯ್ಕೆಗೊಂಡು ಮೈಸೂರಿನ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆದಿದ್ದರು. ಇದೀಗ ತಮ್ಮ ವೃತ್ತಿ ಜೀವನದಲ್ಲಿ ಮೊದಲ ಪೋಸ್ಟಿಂಗ್ ಪಡೆದುಕೊಂಡಿದ್ದರು. ಹಾಸನದ ಜಿಲ್ಲಾ ಎಸ್ ಪಿ ಕಚೇರಿಯಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಜೀಪ್ ನಲ್ಲಿ ಬರುತ್ತಿದ್ದರು.

ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಜೀಪ್ ರಸ್ತೆ ಬದಿಗೆ ಉರುಳಿದೆ. ಪರಿಣಾಮ ತೀವ್ರ ಗಾಯಗೊಂಡಿದ್ದ ಹರ್ಷವರ್ಧನ್ ರನ್ನು ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಎಲ್ಲಾ ಸರಿ ಹೋಗಿದ್ದರೆ ಇಂದು ಡಿವೈಎಸ್ ಪಿಯಾಗಿ ಅಧಿಕಾರ ಸ್ವೀಕರಿಸಬೇಕಿತ್ತು. ಆದರೆ ವಿಪರ್ಯಾಸ ನೋಡಿ ಮಸಣದ ಹಾದಿ ಹಿಡಿಯುವಂತಾಗಿದೆ. ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ  ಸೇರಿದಂತೆ ಅನೇಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕ್ರೀಡಾಳು ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್