Select Your Language

Notifications

webdunia
webdunia
webdunia
webdunia

ನಾಳೆ ಸುಪ್ರೀಂಕೋರ್ಟ್‌ನಲ್ಲಿ ಕಾವೇರಿ ವಿಚಾರಣೆ: ಕಾವೇರಿ ಪ್ರತಿಭಟನಾಕಾರರಲ್ಲಿ ಮೂಡಿದ ಆತಂಕ

ನಾಳೆ ಸುಪ್ರೀಂಕೋರ್ಟ್‌ನಲ್ಲಿ ಕಾವೇರಿ ವಿಚಾರಣೆ: ಕಾವೇರಿ ಪ್ರತಿಭಟನಾಕಾರರಲ್ಲಿ ಮೂಡಿದ ಆತಂಕ
ಬೆಂಗಳೂರು , ಸೋಮವಾರ, 26 ಸೆಪ್ಟಂಬರ್ 2016 (17:16 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಸಚಿವದ್ವಯರು ಕರ್ನಾಟಕ ಪರ ವಕೀಲ ಪಾಲಿ ನಾರಿಮನ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತಿದ್ದಾರೆ.
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ನಾಳೆ ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ಸರಕಾರದ ಅರ್ಜಿ ವಿಚಾರಣೆ ನಡೆಯುವ ಹಿನ್ನೆಲೆಯಲ್ಲಿ  ಕಾನೂನು ಸಚಿವ ಟಿ.ಬಿ.ಜಯಚಂದ್ರ ಹಾಗೂ ಬೃಹತ್ ನೀರಾವರಿ ಸಚಿವ ಎಂ.ಬಿ.ಪಾಟೀಲ್ ಅವರು ನವದೆಹಲಿಯಲ್ಲಿರುವ ಫಾಲಿ ನಾರಿಮನ್ ಅವರ ನಿವಾಸಕ್ಕೆ ತೆರಳಿ ಮುಂದಿನ ಕಾನೂನು ಹೋರಾಟದ ರೂಪರೇಷಗಳ ಕುರಿತು ಚರ್ಚೆ ನಡೆಸಿದ್ದಾರೆ.
 
ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲು ಕರ್ನಾಟಕ ಸರಕಾರಕ್ಕೆ ನಿರ್ದೇಶನ ಕೋರಿ ತಮಿಳುನಾಡು ಸರಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಾಳೆ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹಾಗೂ ನ್ಯಾಯಮೂರ್ತಿ ಉದಯ್ ಲಲಿತ್ ದ್ವಿಸದಸ್ಯ ಪೀಠದ ಮುಂದೆ ನಾಳೆ ವಿಚಾರಣೆಗೆ ಬರಲಿದೆ. 
 
ಕಾವೇರಿ ನದಿಯಿಂದ ತಮಿಳುನಾಡಿಗೆ ಪ್ರತಿನಿತ್ಯ 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸೆಪ್ಟೆಂಬರ್ 20 ರಂದು ನೀಡಿರುವ ಆದೇಶ ಮಾರ್ಪಾಡು ಕೋರಿ ರಾಜ್ಯ ಸರಕಾರ ಇಂದು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಬಿಬಿಎಂಪಿ ನೂತನ ಮೇಯರ್, ಉಪಮೇಯರ್ ಯಾರು ಗೊತ್ತಾ?