Webdunia - Bharat's app for daily news and videos

Install App

ಲವ್ ಜಿಹಾದ್ ಗೆ ಗೃಹಿಣಿಯೋರ್ವಳು ಬಲಿ?

Webdunia
ಗುರುವಾರ, 17 ಮಾರ್ಚ್ 2022 (08:28 IST)
ಶಿವಮೊಗ್ಗ : ಪರಸ್ಪರ ಪ್ರೀತಿಸಿ ಅಂತರ್ ಧರ್ಮೀಯ ವಿವಾಹವಾಗಿದ್ದ ಗೃಹಿಣಿಯೋರ್ವಳು ಹೆರಿಗೆಯಾದ ಐದೇ ದಿನದಲ್ಲಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಸೊರಬದಲ್ಲಿ ನಡೆದಿದೆ.

ಮೃತಪಟ್ಟ ಗೃಹಿಣಿಯನ್ನು ಭೂಮಿಕಾ ಅಲಿಯಾಸ್ ಮುಸ್ಕಾನ್ ಭಾನು(19) ಎಂದು ಗುರುತಿಸಲಾಗಿದೆ. ಭೂಮಿಕಾ ಸಾವಿಗೆ ಲವ್ ಜಿಹಾದ್ ಕಾರಣ ಎಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ.

ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದವಳಾದ ಭೂಮಿಕಾ ಪೋಷಕರು ಕಳೆದ ಎರಡು ವರ್ಷದ ಹಿಂದೆ ಮೃತಪಟ್ಟಿದ್ದರು. ಬಳಿಕ ಭೂಮಿಕಾ ಸೊರಬದ ತನ್ನ ಅಜ್ಜಿ ಮನೆಯಲ್ಲಿ ಆಶ್ರಯ ಪಡೆದಿದ್ದಳು. ಅಜ್ಜಿ ಮನೆಯಲ್ಲಿದ್ದುಕೊಂಡು ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು.

ಈ ವೇಳೆ ಭೂಮಿಕಾಳಿಗೆ ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದ ಸಮೀರ್ ಎಂಬಾತನ ಪರಿಚಯವಾಗಿದೆ. ಪರಿಚಯ ನಂತರ ಇಬ್ಬರು ಪರಸ್ಪರ ಪ್ರೀತಿಸಲು ಆರಂಭಿಸಿದ್ದರು.

ಭೂಮಿಕಾ ಅಪ್ರಾಪ್ತಳಾಗಿ ಇದ್ದಾಗಲೇ ಸಮೀರ್ ವಿವಾಹ ಮಾಡಿಕೊಂಡಿದ್ದ. ವಿವಾಹದ ನಂತರ ಭೂಮಿಕಾ ಹೆಸರನ್ನು ಮುಸ್ಕಾನ್ ಭಾನು ಎಂದು ಬದಲಾಯಿಸಿದ್ದನಂತೆ ಪತಿ ಸಮೀರ್, ಮದುವೆ ನಂತರ ಭೂಮಿಕಾಳಿಗೆ ಆಕೆಯ ಕುಟುಂಬಸ್ಥರು ಭೇಟಿ ಮಾಡಲು ಅವಕಾಶ ನೀಡುತ್ತಿರಲಿಲ್ಲವಂತೆ. ಆಗಾಗ ಪತಿ ಸಮೀರ್ ಆತನ ತಾಯಿ ಹಾಗೂ ಸಹೋದರಿಯರು ಕಿರುಕುಳ ನೀಡುತ್ತಿದ್ದರು ಎಂದು ಮೃತ ಭೂಮಿಕಾ ಕುಟುಂಬಸ್ಥರು ಆರೋಪಿಸಿದ್ದಾರೆ.

ಗರ್ಭಿಣಿಯಾಗಿದ್ದ ಭೂಮಿಕಾಳಿಗೆ ಹೆರಿಗೆಗಾಗಿ ಕಳೆದ ವಾರ ಸೊರಬದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಭೂಮಿಕಾ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಈ ವೇಳೆ ಅಧಿಕ ರಕ್ತಸ್ರಾವವಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರು ಸಲಹೆ ನೀಡಿದ್ದಾರೆ. ನಂತರ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಮೆಗ್ಗಾನ್ ಆಸ್ಪತ್ರೆಯಲ್ಲಿ ಸಹ ಭೂಮಿಕಾ ಚಿಕಿತ್ಸೆಗೆ ಸ್ಪಂದಿಸದ ಕಾರಣ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ವೈದ್ಯರು ಸೂಚಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೇ ಭೂಮಿಕಾ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments