Publish Date: Thu, 25 Jul 2019 (13:03 IST)
Updated Date: Thu, 25 Jul 2019 (13:05 IST)
ಕಾಂಗ್ರೆಸ್ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಮಹತ್ವದ ಚರ್ಚೆ ನಡೆಸಿದ್ದು, ಅಧಿಕಾರ ಉಳಿಸಿಕೊಳ್ಳೋಕೆ ಇನ್ನೂ ಹೆಚ್.ಡಿ.ಕೆ ಬ್ರಹ್ಮಾಸ್ತ್ರ ಬಾಕಿ ಉಳಿಸಿಕೊಂಡಿದ್ದಾರೆಯೇ ಎನ್ನುವ ಪ್ರಶ್ನೆ ಕೇಳಿಬರುತ್ತಿದೆ.
ಮಾಜಿ ಗೃಹ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕರಾಗಿರುವ ರಾಮಲಿಂಗಾರೆಡ್ಡಿ ಜತೆಗೆ ಕುಮಾರಸ್ವಾಮಿ ದೀರ್ಘ ಸಭೆ ನಡೆಸಿದ್ದು, ರಾಜಕೀಯ ಲೆಕ್ಕಾಚಾರದ ಕುರಿತು ಮಾತನಾಡಿದ್ದಾರೆ.
ಬೆಂಗಳೂರಿನ ಪಂಚ ಶಾಸಕರನ್ನು ತಮ್ಮತ್ತ ಸೆಳೆದುಕೊಳ್ಳಲು ಕೊನೆ ಕ್ಷಣದಲ್ಲಿ ಪ್ರಯತ್ನವನ್ನು ಕುಮಾರಸ್ವಾಮಿ ತೀವ್ರಗೊಳಿಸಿದ್ದಾರೆ ಎನ್ನಲಾಗುತ್ತಿದೆ.
ಅತೃಪ್ತ ಶಾಸಕರು ಸಂಪರ್ಕಕ್ಕೆ ಬರಬಹುದು ಎಂದು ಜೆಡಿಎಸ್ ಲೆಕ್ಕಾಚಾರದಲ್ಲಿರುವಾಗಲೇ ಹೊಸ ಬೆಳವಣಿಗೆಗಳು ನಡೆಯುತ್ತಿರೋದು ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿವೆ.