ಸಿಎಂ ಸಿದ್ದರಾಮಯ್ಯರ ಆಪ್ತರಾಗಿರುವ ಮುಸ್ಲಿಂ ಸಮದಾಯದ ಹಿರಿಯ ನಾಯಕ ಸಿಎಂ ಇಬ್ರಾಹಿಂರನ್ನು ಜೆಡಿಎಸ್ ಪಕ್ಷಕ್ಕೆ ಕರೆತರಲು ಜೆಡಿಎಸ್ ನಾಯಕರು ಕಸರತ್ತು ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಸಿಎಂ ಇಬ್ರಾಹಿಂರನ್ನು ಜೆಡಿಎಸ್ ಪಕ್ಷಕ್ಕೆ ಕರೆತಂದು, ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಇಬ್ರಾಹಿಂ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಲು ಪಕ್ಷದ ಯಾವಬ್ಬ ಸದಸ್ಯರು ವಿರೋಧ ವ್ಯಕ್ತಪಡಿಸಿಲ್ಲ ಎಂದು ಹೇಳಲಾಗುತ್ತಿದೆ.
ಪ್ರಸ್ತುತ ಆಡಳಿತ ಪಕ್ಷ ಕಾಂಗ್ರೆಸ್‌ನಲ್ಲಿ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರಾಗಿರುವ ಸಿಎಂ ಇಬ್ರಾಹಿಂ ಅವರ ಜೊತೆ ಜೆಡಿಎಸ್ ನಾಯಕರು ಒಂದು ಸುತ್ತಿನ ಮಾತುಕತೆ ಮುಗಿಸಿದ್ದು, ಸದ್ಯ ಅಮೆರಿಕಾ ಪ್ರವಾಸದಲ್ಲಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹಿಂದಿರುಗಿದ ಬಳಿಕ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
1994ರಲ್ಲಿ ಮುಸ್ಲಿಂ ಸಮದಾಯದ ಹಿರಿಯ ನಾಯಕ ಸಿಎಂ ಇಬ್ರಾಹಿಂ ಅವರು ಜೆಡಿಎಸ್ ಪಕ್ಷದಲ್ಲಿ ರಾಜ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಈ ವೇಳೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಮುಖ್ಯಮಂತ್ರಿಯಾಗಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ