ಇಂದಿರಾ ಕ್ಯಾಂಟೀನ್ ನಿಜವಾಗಿಯೂ ಯಶಸ್ವಿಯಾಗಿದೆಯಾ? ಸಚಿವ ಯುಟಿ ಖಾದರ್ ಹೇಳಿದ್ದೇನು?

ಸೋಮವಾರ, 16 ಜುಲೈ 2018 (10:53 IST)
ಮಂಗಳೂರು: ರಾಜ್ಯ ವಿಧಾನಸಭೆ ಕಲಾಪದಲ್ಲಿ ಇಂದಿರಾ ಕ್ಯಾಂಟೀನ್ ಅವ್ಯವಹಾರಗಳ ಬಗ್ಗೆ ಬಿಜೆಪಿ ಆಕ್ಷೇಪವೆತ್ತಿರುವ ಬೆನ್ನಲ್ಲೇ ಈ ಅಗ್ಗದ ದರದ ಕ್ಯಾಂಟೀನ್ ಬಗ್ಗೆ ಹಲವು ಅನುಮಾನಗಳು ಮೂಡಿವೆ.

ಸಿದ್ದರಾಮಯ್ಯ ಸರ್ಕಾದ ಮಹತ್ವಾಕಾಂಕ್ಷಿ ಯೋಜನೆ ಇಂದಿರಾ ಕ್ಯಾಂಟೀನ್ ನಿಜಕ್ಕೂ ಯಶಸ್ವಿಯಾಗಿದೆಯಾ? ಈ ಬಗ್ಗೆ ವಸತಿ ಸಚಿವ ಯುಟಿ ಖಾದರ್ ಸುದ್ದಿಗಾರರಿಗೆ ಸ್ಪಷ್ಟನೆ ನೀಡಿದ್ದಾರೆ.

‘ಇಂದಿರಾ ಕ್ಯಾಂಟೀನ್ ಯಶಸ್ವಿಯಾಗಿ ಸಾಗುತ್ತಿದೆ. ಆದರೆ ಬಿಜೆಪಿಯವರು ಸೂಕ್ತ ಮಾಹಿತಿ ಇಲ್ಲದೇ ಜನರಲ್ಲಿ ಈ ಕ್ಯಾಂಟೀನ್ ಬಗ್ಗೆ ಇಲ್ಲದ ಗೊಂದಲ ಮೂಡಿಸುತ್ತಿದ್ದಾರೆ. ಬಿಜೆಪಿ ಶಾಸಕ ರಾಮದಾಸ್ ಗೆ ಇದರ ಬಗ್ಗೆ ಸರಿಯಾದ ಮಾಹಿತಿ ಇಲ್ಲದೇ ಸದನದಲ್ಲಿ ಮಾತನಾಡಿದ್ದಾರೆ’ ಎಂದು ಖಾದರ್ ಹೇಳಿದ್ದಾರೆ. ಮೊನ್ನೆಯಷ್ಟೇ ಬಿಜೆಪಿ ಶಾಸಕ ಎಸ್ ಎ ರಾಮದಾಸ್ ಇಂದಿರಾ ಕ್ಯಾಂಟೀನ್ ಅವ್ಯವಹಾರದ ಬಗ್ಗೆ ಮಾಹಿತಿ ನೀಡಲು ಹೊರಟಿದ್ದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಸದಸ್ಯರು ಅವರ ವಿರುದ್ಧ ಮುಗಿಬಿದ್ದಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಫ್ರಾನ್ಸ್ ಫುಟ್ಬಾಲ್ ವಿಶ್ವಕಪ್ ಗೆದ್ದ ಖುಷಿಯಲ್ಲಿ ಎಡವಟ್ಟು ಟ್ವೀಟ್ ಮಾಡಿದ ಕಿರಣ್ ಬೇಡಿ