ದಲಿತರ ಮನೆಯಲ್ಲಿ ಊಟ ಮಾಡುವುದು ದೊಡ್ಡ ವಿಚಾರವೇ: ಬಿಜೆಪಿ ನಾಯಕರಿಗೆ ಖರ್ಗೆ ಪ್ರಶ್ನೆ

Webdunia
ಭಾನುವಾರ, 21 ಮೇ 2017 (14:49 IST)
ದಲಿತರ ಮನೆಯಲ್ಲಿ ಊಟ ಮಾಡುವುದು ದೊಡ್ಡ ವಿಚಾರವೇ ಎಂದು ಬಿಜೆಪಿ ನಾಯಕರಿಗೆ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಪ್ರಶ್ನಿಸಿದ್ದಾರೆ.
 
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಮೇಟಿಕುರ್ಕೆ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಮ್ಮ ಜೊತೆ ದಲಿತರಿಲ್ಲ ಎನ್ನುವುದನ್ನು ಈ ಮೂಲಕ ಸ್ಪಷ್ಟಪಡಿಸಿದ್ದೀರಿ. ಬಿಜೆಪಿ ಪ್ರಚಾರ ಪಡೆಯಲು ದಲಿತರಿಗೆ ಅಪಮಾನ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ಐಎಎಸ್ ಅದಿಕಾರಿ ಅನುರಾಗ್ ತಿವಾರಿ ಸಾವಿನ ವಿಷಯದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಅನುರಾಗ್ ತಿವಾರಿ ಉತ್ತರಪ್ರದೇಶದಲ್ಲಿ ಮೃತಪಟ್ಟಿದ್ದಾರೆ. ಉತ್ತರಪ್ರದೇಶದಲ್ಲಿ ಬಿಜೆಪಿ ಸರಕಾರವಿದೆ. ಯಾವುದೇ ತನಿಖೆ ನಡೆಸಲಿ. ರಾಜ್ಯ ಸರಕಾರ ಸಂಪೂರ್ಣ ಸಹಕಾರ ನೀಡಲು ಸಿದ್ದವಿದೆ ಎಂದರು.
 
ಬಿಜೆಪಿಯವರು ಹಿರಿಯ ಐಎಎಸ್ ಅಧಿಕಾರಿ ಸಾವಿನ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಅವರು ನಮ್ಮ ರಾಜ್ಯದಲ್ಲಿ ಸೇವೆ ಸಲ್ಲಿಸಿದ್ದಾರೆ ಎನ್ನುವುದು ಮರೆಯುವುದು ಬೇಡ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಕಿವಿಮಾತು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಂದಾ ತಿಂದು ಹೋಗಲು ಬಂದಿದ್ದೀರಾ ಎಂದು ಜನರು ಕೇಳುವಂತಾಗಿದೆ ಅಧಿವೇಶನ: ಛಲವಾದಿ ನಾರಾಯಣಸ್ವಾಮಿ

ಗೃಹಲಕ್ಷ್ಮಿ ಹಣ ನಡುವೆ ಎರಡು ತಿಂಗಳು ಕೊಡದಿರುವುದಕ್ಕೆ ಕಾರಣವೇನು: ಸರ್ಕಾರಕ್ಕೆ ಬಿಜೆಪಿ ಸದನದಲ್ಲಿ ಲೆಫ್ಟ್ ರೈಟ್

ಸೋನಿಯಾ ಗಾಂಧಿ ಕುಟುಂಬದ ಜೊತೆ ನಾವಿದ್ದೇವೆ: ಬೀದಿಗಿಳಿದು ಹೋರಾಟ ಮಾಡಿದ ಸಿದ್ದರಾಮಯ್ಯ ಮತ್ತು ಕೈ ನಾಯಕರು

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments