Select Your Language

Notifications

webdunia
webdunia
webdunia
webdunia

ಬಿಜೆಪಿಯಿಂದ ಶಾಸಕ ರಾಜು ಕಾಗೆ ಉಚ್ಚಾಟನೆ?, ಜಗದೀಶ್ ಶೆಟ್ಟರ್ ಹೇಳಿದ್ದೇನು?

ಬಿಜೆಪಿಯಿಂದ ಶಾಸಕ ರಾಜು ಕಾಗೆ ಉಚ್ಚಾಟನೆ?, ಜಗದೀಶ್ ಶೆಟ್ಟರ್ ಹೇಳಿದ್ದೇನು?
ಹುಬ್ಬಳ್ಳಿ , ಗುರುವಾರ, 19 ಜನವರಿ 2017 (14:58 IST)
ಕಾಂಗ್ರೆಸ್ ನಾಯಕನ ಮೇಲೆ ಹಲ್ಲೆ ಪ್ರಕರಣದ ಆರೋಪದಡಿಯಲ್ಲಿ ಬಂಧನಕ್ಕೊಳಗಾಗಿರುವ ಶಾಸಕ ರಾಜು ಕಾಗೆ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ನಾಳೆ ಕಲಬುರ್ಗಿಯಲ್ಲಿ ನಡೆಯುವ ಕೋರ್ ಕಮಿಟಿಯಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ.
 
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ಹುದ್ದೆ ನೇಮಕಕ್ಕೆ ರಾಜ್ಯ ಸರಕಾರ ಆಸಕ್ತಿ ತೋರಿಸುತ್ತಿಲ್ಲ. ರಾಜ್ಯ ಸರಕಾರದ ಅವಧಿ ಮುಗಿಯುತ್ತಾ ಬಂದರೂ ಲೋಕಾಯುಕ್ತರ ನೇಮಕವಾಗಿಲ್ಲ. ಲೋಕಾಯುಕ್ತ ಸಂಸ್ಥೆಯ ಪರಿಸ್ಥಿತಿ ಹಲ್ಲುಕಿತ್ತ ಹಾವಿನಂತಾಗಿದೆ. ಈಗ ನೋಡಿ ಎಸಿಬಿ ಪರಿಸ್ಥಿತಿ ಹೇಗಾಗಿದೆ ಎಂದರು.
 
ಳಗಾವಿ ಜಿಲ್ಲೆಯ ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ಅವರ ರೌಡಿ ಗ್ಯಾಂಗ್, ಫೇಸ್‌ಬುಕ್‌ನಲ್ಲಿ ಕಮೆಂಟ್ ಮಾಡಿದ್ದ ಕಾಂಗ್ರೆಸ್ ನಾಯಕ ವಿವೇಕ ಶೆಟ್ಟಿ ಮನೆಗೆ ನುಗ್ಗಿ ಮಹಿಳೆ ಮಕ್ಕಳು ಎನ್ನುವುದನ್ನು ನೋಡದೆ ಅಟ್ಟಹಾಸ ಮೆರೆದಿದ್ದು, ಈ ಭೀಭತ್ಸ ಕೃತ್ಯದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದವು.
 
ಶಾಸಕ ರಾಜು ಕಾಗೆ ಪುತ್ರಿ ಪ್ರತೀಕ್ಷಾ ಜೊತೆಗೆ 11 ಜನರ ರೌಡಿ ತಂಡ ಏಕಾಏಕಿ ಕಾಂಗ್ರೆಸ್ ನಾಯಕ ವಿವೇಕ ಶೆಟ್ಟಿ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ. ವಿವೇಕ ಶೆಟ್ಟಿಯನ್ನು ಗ್ರಾಮಸ್ಥರ ಎದುರೇ ರಸ್ತೆಗೆ ಎಳೆತಂದು ಕತ್ತು ಹಿಸುಕಿ ಕೊಲೆ ಮಾಡಲು ಸಹ ಯತ್ನ ನಡೆದಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಈಶ್ವರಪ್ಪ ರಾಜ್ಯಾಧ್ಯಕ್ಷರಾದರೇ ಬಿಜೆಪಿಗೆ 160 ಸೀಟ್ ಗ್ಯಾರಂಟಿ: ಆಯನೂರು ಮಂಜುನಾಥ್ ವ್ಯಂಗ್ಯ