ಕೊಪ್ಪಳ : ಪ್ರಧಾನಿ ನರೇಂದ್ರ ಮೋದಿಯವರನ್ನು ನಾಗರಹಾವಿಗೆ ಹೋಲಿಸುತ್ತಾರೆ. ಹಾಗಿದ್ರೆ ಸೋನಿಯಾ ಗಾಂಧಿ ವಿಷಕನ್ಯೆನಾ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಪ್ರಶ್ನಿಸಿದರು.
ಮೋದಿ ವಿಷದ ಹಾವು ಎಂಬ ಖರ್ಗೆಯವರ ಹೇಳಿಕೆ ಕುರಿತಾಗಿ ಕೊಪ್ಪಳದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ದೇಶದ ಪ್ರಧಾನಿಯನ್ನು ಹೇಗೆ ಮಾತನಾಡಿಸಬೇಕು ಎಂಬುದು ಗೊತ್ತಿಲ್ಲ.
 
 			
 
 			
			                     
							
							
			        							
								
																	ಇವತ್ತು ಮೋದಿಯವರನ್ನು ಇಡೀ ಜಗತ್ತು ಒಪ್ಪಿಕೊಂಡಿದೆ. ಅಮೆರಿಕಾ ಒಂದು ಕಾಲದಲ್ಲಿ ಭಾರತೀಯರಿಗೆ ವೀಸಾ ಕೊಡುತ್ತಿರಲಿಲ್ಲ. ಆದರೆ ಇವತ್ತು ನಮ್ಮ ಪ್ರಧಾನ ಮಂತ್ರಿಯನ್ನು ಕೆಂಪು ಹಾಸಿಗೆ ಮೂಲಕ ಸ್ವಾಗತ ಮಾಡಿ ಹೆಗಲ ಮೇಲೆ ಕೈ ಹಾಕಿಕೊಂಡು ಹೋಗುವಂತಹ ವಿಶ್ವ ನಾಯಕರಾಗಿದ್ದಾರೆ.
									
										
								
																	ಅಂತಹವರನ್ನು ನಾಗರ ಹಾವಿಗೆ ಹೋಲಿಸಿದ್ದಾರೆ. ಸೋನಿಯಾ ಗಾಂಧಿ ಚೀನಾ ಮತ್ತು ಪಾಕಿಸ್ತಾನದ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ. ಪಾಕಿಸ್ತಾನದಿಂದ ಎಲ್ಲರೂ ಬಂದು ಮೋದಿಯವರನ್ನು ಇಳಿಸಬೇಕು ಎಂದು ಹೇಳಿಕೆ ಕೊಟ್ಟಿದ್ದಾರೆ. ಅವರು ತಮ್ಮ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಖರ್ಗೆಯವರ ಹೇಳಿಕೆಯಿಂದ ನಮ್ಮ ದೇಶದ ಪ್ರಧಾನಿಯನ್ನು ಅಪಮಾನ ಮಾಡುವ ಕೆಲಸ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.