Select Your Language

Notifications

webdunia
webdunia
webdunia
webdunia

ಹಿಂದೂ ಸಂಘಟನೆಯ ನಾಯಕರನ್ನು ಟಾರ್ಗೆಟ್ ಮಾಡ್ತಿದೆಯಾ ಕಾಂಗ್ರೆಸ್ ಸರ್ಕಾರ? ನೆಟ್ಟಿಗರು ಹೇಳಿದ್ದೇನು?

ಹಿಂದೂ ಸಂಘಟನೆಯ ನಾಯಕರನ್ನು ಟಾರ್ಗೆಟ್ ಮಾಡ್ತಿದೆಯಾ ಕಾಂಗ್ರೆಸ್ ಸರ್ಕಾರ? ನೆಟ್ಟಿಗರು ಹೇಳಿದ್ದೇನು?
ಬೆಂಗಳೂರು , ಶುಕ್ರವಾರ, 29 ಡಿಸೆಂಬರ್ 2023 (10:12 IST)
ಬೆಂಗಳೂರು: ಇತ್ತೀಚೆಗೆ ಕೆಲವು ಹಿಂದೂ ಸಂಘಟನೆಯ ನಾಯಕರ ಮೇಲೆ ವಿವಿಧ ಕಾರಣಗಳಿಗೆ ಪ್ರಕರಣ ದಾಖಲಿಸುತ್ತಿರುವ ಬೆನ್ನಲ್ಲೇ ಬಲಪಂಥೀಯರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂ ಸಂಘಟನೆಯ ನಾಯಕರನ್ನು ಸಿದ್ದರಾಮಯ್ಯ ಸರ್ಕಾರ ಟಾರ್ಗೆಟ್ ಮಾಡಿಕೊಂಡಿದೆ ಎಂದು ನೆಟ್ಟಿಗರು ಆರೋಪಿಸಿದ್ದಾರೆ.

ಇತ್ತೀಚೆಗೆ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಮುಸ್ಲಿಂ ಮಹಿಳೆಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಕಾರಣಕ್ಕೆ ಪ್ರಕರಣ ದಾಖಲಿಸಲಾಗಿದ್ದು, ಇದೀಗ ಬಂಧನಕ್ಕೆ ಒತ್ತಡ ಕಂಡುಬರುತ್ತಿದೆ. ಇದರ ನಡುವೆ ಹಿಂದೂ ಸಂಘಟನೆಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧವೂ ಮಾಲ್ ನಲ್ಲಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್ ದಾಖಲಿಸಲಾಗಿದೆ.

ಅದರ ಜೊತೆಗೆ ಸಂಸತ್ ನಲ್ಲಿ ಭದ್ರತಾ ಲೋಪವೆಸಗಲು ಕಾರಣರಾದವರಿಗೆ ಪಾಸ್ ನೀಡಿದ್ದಾರೆಂಬ ಆರೋಪ ಹೊತ್ತಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಈಗ ಸೋಮಾರಿ ಸಿದ್ಧ ಎಂಬ ಪದ ಬಳಕೆ ಮಾಡಿದ್ದಾರೆಂದು ಪ್ರಕರಣ ದಾಖಲಿಸಲಾಗಿದೆ.

ಈ ಎಲ್ಲಾ ಬೆಳವಣಿಗೆಗಳ ಹಿನ್ನಲೆಯಲ್ಲಿ ಬಿಜೆಪಿ ಮತ್ತು ಬಲಪಂಥೀಯ ಸಮರ್ಥಕರು ಇದೆಲ್ಲಾ ಬೇಕೆಂದೇ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ತಂತ್ರ. ಬೇಕೆಂದೇ ಹಿಂದೂ ನಾಯಕರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಆರೋಪಿಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ತನಿಖೆ ಮಾಡದೇ ಕೈತೊಳೆದುಕೊಂಡ್ರಾ ಆರೋಗ್ಯ ಸಚಿವರು!