ಕಾನೂನು ಬಿಜೆಪಿಗೆ ಬೇರೆ ಇತರಿಗೆ ಬೇರೆ ಇದೇಯಾ..?ಎಂದು ಟ್ವೀಟ್ ಮಾಡಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.ಬಿಬಿಎಂಪಿ ವ್ಯಾಪ್ತಿಯಲ್ಲಿ ಫ್ಲೆಕ್ಸ್, ಬ್ಯಾನರ್ ನಿಷೇಧವಿದೆ .ನಿಷೇಧವಿದ್ರೂ ಬಿಜೆಪಿಯವರು ಬ್ಯಾನರ್ ಹಾಕಿದ್ದಾರೆ .ಬೆಂಗಳೂರಿನಾದ್ಯಂತ 5 ಸಾವಿರಕ್ಕೂ ಹೆಚ್ಚು ಬ್ಯಾನರ್ ಹಾಕಲಾಗಿದೆ.ಬಿಬಿಎಂಪಿ ಕಮಿಷನರ್ ಪೊಲೀಸರು ಕೇಸ್ ದಾಖಲಿಸಿಲ್ಲ ಏಕೆ? ಬಿಜೆಪಿಯ ಬ್ಯಾನರ್‌ಗಳನ್ನು ತೆರವು ಮಾಡಲಿಲ್ಲ ಏಕೆ? ಕಾನೂನು ಬಿಜೆಪಿಗೆ ಬೇರೆ, ಇತರರಿಗೆ ಬೇರೆ ಇದೆಯಾ? ಎಂದು
ಟ್ವೀಟ್ ಮಾಡಿ ಸರ್ಕಾರದ ವಿರುದ್ದ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
BBMP ವ್ಯಾಪ್ತಿಯಲ್ಲಿ ಫ್ಲೆಕ್ಸ್, ಬ್ಯಾನರ್‌ಗಳಿಗೆ ನಿಷೇಧವಿದ್ದರೂ ಬೆಂಗಳೂರಿನಾದ್ಯಂತ 5000ಕ್ಕೂ ಹೆಚ್ಚು ಬಿಜೆಪಿ ಪಕ್ಷದ ಅನಧಿಕೃತ ಬ್ಯಾನರ್‌ಗಳನ್ನು ಹಾಕಲಾಗಿದೆ.@BBMPCOMM, @BlrCityPolice ಅವರೇ, ಇವರ ವಿರುದ್ಧ ಪ್ರಕರಣ ದಾಖಲಿಸಲಿಲ್ಲವೇಕೆ?ಬ್ಯಾನರ್‌ಗಳನ್ನು ತೆರವು ಮಾಡಲಿಲ್ಲ ಏಕೆ?ಕಾನೂನು ರಾಜಕೀಯ ದ್ವೇಷಕ್ಕೆ ಬಳಸಿಕೊಳ್ಳಲು ಮಾತ್ರ ಇರುವುದೇ @BSBommai ಅವರೇ?ಕಾಂಗ್ರೆಸ್ ಬ್ಯಾನರ್‌ಗಳಿಗೆ ತಾವು ತೋರುವ ವೀರಾವೇಶ ನಿಮ್ಮ ಪಕ್ಷದವರ ಬ್ಯಾನರ್‌ಗಳಿಗೆ ತೋರುತ್ತಿಲ್ಲವೇಕೆ?ಬೆಂಗಳೂರನ್ನು ಹಾಗೂ ಕಾನೂನನ್ನು ಬಿಜೆಪಿ ಪಕ್ಷ ಗುತ್ತಿಗೆ ಪಡೆದಿದೆಯೇ@BBMPCOMM ಅವರೇ ಕ್ರಮ ಕೈಗೊಂಡು ತಮ್ಮ ನಿಷ್ಪಕ್ಷಪಾತವನ್ನು ನಿರೂಪಿಸಿ ಎಮನದು ಕಾಂಗ್ರೆಸ್ ಟ್ವೀಟ್ ಮಾಡಿದೆ.