Publish Date: Wed, 04 Oct 2023 (18:20 IST)
Updated Date: Wed, 04 Oct 2023 (19:58 IST)
ಸಿದ್ದರಾಮಯ್ಯನವರ ಸರ್ಕಾರ ಕರ್ನಾಟಕವನ್ನು ಹಿಂದಿನ ಕಾಶ್ಮೀರ ಮಾಡಲು ಹೊರಟಿದೆಯೇ ಎಂಬ ಸಂಶಯ ಮೂಡುತ್ತಿದೆ ಎಂದು ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.ಶಿವಮೊಗ್ಗದ ಈದ್ ಮೆರವಣಿಗೆ ಸಂದರ್ಭದಲ್ಲಿ ಕಲ್ಲೆಸೆತ ಘಟನೆಯ ಬಗ್ಗೆ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಘಟನೆಯ ಬಗ್ಗೆ ಅಲ್ಲಿನ ಮಹಿಳೆಯರು ಆತಂಕ ವ್ಯಕ್ತಪಡಿಸಿದ್ದಾರೆ, ಹಿಂದೂಗಳ ಮನೆಗೆ ನುಗ್ಗಿ ಕಲ್ಲು ಹೊಡೆದು ಮಾನ, ಪ್ರಾಣಕ್ಕೆ ಬೆದರಿಕೆ ಹಾಕಿದ್ದಾರೆ ಎಂದರು.