Select Your Language

Notifications

webdunia
webdunia
webdunia
webdunia

ಅತಿಥಿ ಉಪನ್ಯಾಸಕರ ಸಮಸ್ಯೆಗೆ ಪರಿಹಾರ ಸಿಕ್ಕೇ ಬಿಡ್ತ?

ಅತಿಥಿ ಉಪನ್ಯಾಸಕರ ಸಮಸ್ಯೆಗೆ ಪರಿಹಾರ ಸಿಕ್ಕೇ ಬಿಡ್ತ?
ಬೆಂಗಳೂರು , ಶನಿವಾರ, 8 ಜನವರಿ 2022 (07:16 IST)
ಬೆಂಗಳೂರು : ಅತಿಥಿ ಉಪನ್ಯಾಸಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಕುರಿತು ಚರ್ಚಿಸಲು ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ನಿಯೋಗವು ಇಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಅವರನ್ನು ಭೇಟಿ ಮಾಡಿತು.

ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ಕೂಡ ಅಶ್ವಥ್ ನಾರಾಯಣ್ ಅವರನ್ನು ಭೇಟಿ ಮಾಡಿದ ಸಮಯದಲ್ಲಿ ಇದ್ದರು. ಈ ವೇಳೆ ಅತಿಥಿ ಉಪನ್ಯಾಸಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಆದಷ್ಟು ಬೇಗ ಪರಿಹಾರ ನೀಡುವಂತೆ ನಿಯೋಗವು ಮನವಿ ಸಲ್ಲಿಸಿತು. 

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಅತಿಥಿ ಉಪನ್ಯಾಸಕರ ಸಮಸ್ಯೆಗಳ ಬಗ್ಗೆ ವಿಧಾನ ಪರಿಷತ್ ಸದಸ್ಯರು, ಅತಿಥಿ ಉಪನ್ಯಾಸಕರ ಸಂಘಟನೆಗಳು ಮತ್ತು ಸಂಬಂಧಿಸಿದ ಎಲ್ಲರೊಂದಿಗೂ ಚರ್ಚಿಸಿ, ಶೀಘ್ರದಲ್ಲೇ ಪರಿಹಾರ ಕಂಡುಹಿಡಿಯಲಾಗುವುದು ಎಂದು ಭರವಸೆ ನೀಡಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಎರಡು ಡೋಸ್ ಲಸಿಕೆ ಪಡೆದವರಿಗೆ ಗ್ರೀನ್ ಪಾಸ್