Select Your Language

Notifications

webdunia
webdunia
webdunia
webdunia

ಯಡಿಯೂರಪ್ಪ ಜೈಲಿಗೆ ಹೋದಾಗ ಎಸಿಬಿ ಇತ್ತಾ…?

ಯಡಿಯೂರಪ್ಪ ಜೈಲಿಗೆ ಹೋದಾಗ ಎಸಿಬಿ ಇತ್ತಾ…?
ಬೆಂಗಳೂರು , ಶುಕ್ರವಾರ, 22 ಸೆಪ್ಟಂಬರ್ 2017 (19:22 IST)
ಬೆಂಗಳೂರು: ಯಡಿಯೂರಪ್ಪ ಡಿನೋಟಿಫಿಕೇಶನ್ ವಿಚಾರದಲ್ಲಿ ಕೋರ್ಟ್ ನಲ್ಲಿ ಸ್ಟೇ ಸಿಗೋದು ಸಾಮಾನ್ಯವಾಗಿ ನಡೆಯುವ ವಿಚಾರ. ಮುಂದೆ ಏನಾಗುತ್ತೆ ಕಾದು ನೋಡೋಣ. ಆಗ ಯಡಿಯೂರಪ್ಪ ಜೈಲಿಗೆ ಹೋದಾಗ ಎಸಿಬಿ ಇತ್ತಾ ಎಂದು ಸಾರಿಗೆ ಸಚಿವ ರೇವಣ್ಣ ಬಿಜೆಪಿಗೆ ಪ್ರಶ್ನೆ ಹಾಕಿದ್ದಾರೆ.

ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಮಿಷನ್ ದೋಖಾಗೆ ಸಂಬಂಧಿಸಿದಂತೆ ಸಖಾಸಗಿ ಎಮಿಷನ್ ಟೆಸ್ಟ್ ಸೆಂಟರ್ ಗಳನ್ನು ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತೇವೆ. ಸೂಕ್ತ ದಾಖಲೆಗಳು ಇಲ್ಲದಿದ್ದರೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಈಗ ನನ್ನ ಗಮನಕ್ಕೆ ಬಂದಿದೆ. ಕೂಡಲೇ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದರು.

ಕರ್ನಾಟಕ ಸಾರಿಗೆ ವ್ಯವಸ್ಥೆ 280 ವಿವಿಧ ಪ್ರಶಸ್ತಿ ಸಿಕ್ಕಿರುವುದಕ್ಕೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಪ್ರಶಂಸಿಸಿದ್ದಾರೆ. ಚಿತ್ರದುರ್ಗ ಮತ್ತು ಶಿವಮೊಗ್ಗದಲ್ಲಿ ಸಾರಿಗೆ ವಿಭಾಗೀಯ ಕಚೇರಿಗಳು ಆರಂಭಿಸಲಾಗುವುದು. ಒಂದೂವರೆ ಸಾವಿರ ಬಸ್ ಖರೀದಿಗೆ ಕ್ರಮ ತೆಗೆದುಕೊಳ್ಳಲಾಗಿದ್ದು, ಇವು ಬಾಡಿಗೆ ಆಧಾರದಲ್ಲಿ ಪಡೆಯಲು ನಿರ್ಧರಿಸಲಾಗಿದೆ. ಸಾರಿಗೆ ತರಬೇತಿ ಕಾರ್ಯಾಗಾರಕ್ಕೆ ಒತ್ತು ನೀಡಿ, ಡಿಪೋಗಳಲ್ಲಿ ಭಾರಿ ಪ್ರಮಾಣದ ಸ್ಕ್ರಾಪ್ ಶೀಘ್ರ ತೆರವಿಗೆ ಹರಾಜು ಪ್ರಕ್ರಿಯೆ ಆರಂಭಿಸಲು ಕ್ರಮಕೈಗೊಳ್ಳಲಗುವುದು ಎಂದು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೌಟಂಬಿಕ ಕಲಹ: ಹಾಡಹಗಲೇ ತಂಗಿಯ ಕತ್ತು ಕೊಯ್ದ ಅಣ್ಣ