ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಸಿಎಂ ಸಿದ್ದರಾಮಯ್ಯ ಆಪ್ತ ಹಾಗೂ ಅಳಂದ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಅವರು ಶನಿವಾರ ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿರುವುದು ಕುತೂಹಲ ಮೂಡಿಸಿದೆ. ಇದೀಗ ರಾಜ್ಯ ರಾಜಕಾರಣದಲ್ಲಿ ಬಿಆರ್ ಪಾಟೀಲ್ ಅವರ ದಿಢೀರ್ ರಾಜೀನಾಮೆ ಚರ್ಚೆಗೆ ಕಾರಣವಾಗಿದೆ.
ಈ ಸಂಬಂಧ ಬಿಆರ್ ಪಾಟೀಲ್ ಅವರು ಪ್ರತಿಕ್ರಿಯಿಸಿ, ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ನಾನು ರಾಜೀನಾಮೆ ನೀಡಿದ್ದೇನೆ. ರಾಜೀನಾಮೆ ಪತ್ರವನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಈಗಾಗಲೇ ತಲುಪಿಸಿದ್ದೇನೆ ಎಂದರು.
ಆದರೆ ರಾಜೀನಾಮೆಗೆ ಕಾರಣ ಏನು ಎಂಬ ಪ್ರಶ್ನೆಗೆ, ನಾನಾಗಿಯೇ ತನ್ನ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದ್ದಾರೆ. ಆದರೆ ಬಿಆರ್ ಪಾಟೀಲ್ ಅವರ ದಿಢೀರ್ ನಿರ್ಧಾರ ಅಚ್ಚರಿಗೆ ಕಾರಣವಾಗಿದೆ. ಏಕಾಏಕಿ ರಾಜೀನಾಮೆ ಏಕೆ ನೀಡಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ.
ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ತಮಗೆ ಯಾವುದೇ ಸ್ಥಾನಮಾನ ನೀಡಿಲ್ಲ ಎಂದು ಕೆಲ ಹಿರಿಯ ಶಾಸಕರು ಅಸಮಾಧಾನಗೊಂಡಿದ್ದರು. ಇದೇ ಕಾರಣಕ್ಕೆ ಬಿಆರ್ ಪಾಟೀಲ್ ರಾಜೀನಾಮೆ ನೀಡಿದ್ರಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.