‌ಅನಧಿಕೃತ ರೆಸಾರ್ಟ್‌, ಹೋಂ ಸ್ಟೇ ತೆರವಿಗೆ ಕಾರ್ಯಪಡೆ ರಚಿಸಿದ ಈಶ್ವರ ಖಂಡ್ರೆ

Sampriya
ಭಾನುವಾರ, 4 ಆಗಸ್ಟ್ 2024 (16:49 IST)
ಬೆಂಗಳೂರು: ವಯನಾಡು ದುರಂತದಿಂದ ಎಚ್ಚೆತ್ತಿರುವ ರಾಜ್ಯ ಸರ್ಕಾರ  10 ಜಿಲ್ಲೆಗಳಲ್ಲಿ ಆವರಿಸಿರುವ ಪಶ್ಚಿಮಘಟ್ಟ ಸೇರಿದಂತೆ ಎಲ್ಲ ಘಟ್ಟ ಪ್ರದೇಶದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ರೆಸಾರ್ಟ್, ಹೋಂ ಸ್ಟೇ ಮತ್ತು ಇಲ್ಲಿನ ಎಲ್ಲ ಅರಣ್ಯ ಒತ್ತುವರಿಗಳನ್ನು ತೆರವು ಮಾಡಲು 'ಪಶ್ಚಿಮಘಟ್ಟ ಸೇರಿ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ' ರಚಿಸಿರುವುದಾಗಿ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಘೋಷಿಸಿದ್ದಾರೆ.

ಈ ಕಾರ್ಯಪಡೆಯನ್ನು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥರ ನೇತೃತ್ವದಲ್ಲಿ ರಚಿಸಿದ್ದು, ನಾಳೆಯಿಂದಲೇ ಈ ಕಾರ್ಯಪಡೆ ಪಶ್ಚಿಮಘಟ್ಟ ಮತ್ತು ಇತರ ಘಟ್ಟ ಪ್ರದೇಶಗಳಲ್ಲಿನ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

 2015ರ ನಂತರ ಘಟ್ಟ ಪ್ರದೇಶಗಳಲ್ಲಿನ ಅರಣ್ಯದಲ್ಲಿ ಆಗಿರುವ ಒತ್ತುವರಿಗೆ ಸಂಬಂಧಿಸಿದಂತೆ ಕಾನೂನು ಪ್ರಕ್ರಿಯೆ ಪೂರ್ಣಗೊಂಡಿರುವ ಎಲ್ಲ ಪ್ರಕರಣಗಳಲ್ಲಿ ಇಂದಿನಿಂದಲೇ ತೆರವು ಕಾರ್ಯಾಚರಣೆ ಮಾಡಲು ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಎಸಿಎಫ್, ಡಿಸಿಎಫ್, ಸಿಎಫ್, ಸಿಸಿಎಫ್, ಎ.ಪಿ.ಸಿಸಿಎಫ್ ಗಳಿಗೂ ಅರಣ್ಯ ಒತ್ತುವರಿ ಪ್ರಕರಣಗಳ ವಿಚಾರಣೆ ನಡೆಸಿ 64ಎ ಅಡಿಯಲ್ಲಿ ಆದೇಶ ನೀಡಲು ಅವಕಾಶವಿದ್ದು, ಬಾಕಿ ಇರುವ ಎಲ್ಲ 64 ಎ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಲು ಎಸಿಎಫ್ ಮೇಲ್ಪಟ್ಟ ದರ್ಜೆಯ ಎಲ್ಲ ಅಧಿಕಾರಿಗಳಿಗೂ ವಾರದಲ್ಲಿ ಎರಡು ದಿನ ತಮ್ಮ ತಮ್ಮ ವಲಯದಲ್ಲಿ ಪ್ರಕ್ರಿಯೆ ನಡೆಸಿ ತ್ವರಿತವಾಗಿ ಆದೇಶ ನೀಡಲು ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.

ಇನ್ನೂ ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಲು ಅಡ್ವೊಕೇಟ್ ಜನರಲ್ ಅವರೊಂದಿಗೆ ಸಮಾಲೋಚಿಸಿ ಸೂಕ್ತ ಕ್ರಮ ಕೈಗೊಳ್ಳಲಿ ಪಶ್ಚಿಮಘಟ್ಟ ಅರಣ್ಯ ಒತ್ತುವರಿ ಕಾರ್ಯಪಡೆಗೆ ಸೂಚನೆ ನೀಡಲಾಗಿದೆ ಎಂದು ಈಶ್ವರ ಖಂಡ್ರೆ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ನ್ಯಾಷನಲ್ ಹೆರಾಲ್ಡ್‌ ಪ್ರಕರಣ, ಸೋನಿಯಾ, ರಾಹುಲ್ ಗಾಂಧಿಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments