Publish Date: Sat, 16 Apr 2022 (16:41 IST)
Updated Date: Sat, 16 Apr 2022 (16:43 IST)
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಹಿನ್ನೆಲೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಮನೆಗೆ ಸ್ವಾಮೀಜಿಗಳು ಭೇಟಿ ನೀಡಿದ್ದಾರೆ. ಶಿವಮೊಗ್ಗದಲ್ಲಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮನೆಗೆ ಕಾಗಿನೆಲೆಯ ಪುರುಷೋತ್ತಮ ನಂದಪುರಿ ಸ್ವಾಮೀಜಿ, ಮಾದಾರ ಚನ್ನಯ್ಯ ಸ್ವಾಮೀಜಿ, ಹೊಸದುರ್ಗದ ಈಶ್ವರನಂದಪುರಿ ಸೇರಿ ಒಟ್ಟು 9 ಸ್ವಾಮೀಜಿಗಳು ಈಶ್ವರಪ್ಪ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.. ಸಂತೋಷ್ ಆತ್ಮಹತ್ಯೆ ಕೇಸ್ನಲ್ಲಿ ಈಶ್ವರಪ್ಪ ರಾಜೀನಾಮೆ ಹಿನ್ನೆಲೆ ಈಶ್ವರಪ್ಪಗೆ ಸ್ವಾಮೀಜಿಗಳು ಧೈರ್ಯ ತುಂಬಿದ್ದಾರೆ.. ಅಷ್ಟೇ ಅಲ್ಲದೆ, ಕೆ.ಎಸ್. ಈಶ್ವರಪ್ಪಗೆ ಕರೆ ಮಾಡಿದ ಮಂತ್ರಾಲಯದ ಶ್ರೀಗಳು ನೀವು ಯಾವುದಕ್ಕೂ ವಿಚಲಿತರಾಗಬೇಡಿ, ನಿಮ್ಮ ಜೊತೆ ನಾವಿದ್ದೇ ವೆ ಎಂದು ಧೈರ್ಯ ತುಂಬಿದ್ದಾರೆ.