Webdunia - Bharat's app for daily news and videos

Install App

ದೇವೇಗೌಡರಿಗೆ ಟೋಪಿ ಹಾಕಿ ಕಾಂಗ್ರೆಸ್‍ ಗೆ ಬಂದ ಸಿದ್ದರಾಮಯ್ಯ ಸತ್ಯಹರಿಶ್ಚಂದ್ರರಂತೆ ಮಾತನಾಡುತ್ತಿದ್ದಾರೆ- ಈಶ್ವರಪ್ಪ ವಾಗ್ದಾಳಿ

Webdunia
ಮಂಗಳವಾರ, 12 ಫೆಬ್ರವರಿ 2019 (07:01 IST)
ಬೆಂಗಳೂರು : ಆಪರೇಷನ್ ಜನಕ ಎಂದರೇ ಮಾಜಿ ಸಿಎಂ ಸಿದ್ದರಾಮಯ್ಯ, ಅವರು ಕಾಂಗ್ರೆಸ್‍ಗೆ ಹೋದಾಗಲೇ ರಾಜ್ಯದಲ್ಲಿ ಆಪರೇಷನ್ ಶುರುವಾಗಿದ್ದು ಎಂದು ಶಾಸಕ ಕೆಎಸ್ ಈಶ್ವರಪ್ಪ ಅವರು ಆರೋಪ ಮಾಡಿದ್ದಾರೆ.


ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದನದಲ್ಲಿ ನಾನು ಆಡಿಯೋ ತನಿಖೆ ಬಗ್ಗೆ ಮಾತನಾಡುವ ವೇಳೆ ಕಳ್ಳನ ಕೈಗೆ ಬೀಗ ಕೊಟ್ಟಿದ್ದಾರೆ ಎಂದಿದ್ದಕ್ಕೆ ಆಡಳಿತ ಪಕ್ಷಕ್ಕೆ ಅಘಾತವಾಗಿರಬಹದು. ಅದು ಒಂದು ಭಾಗದಲ್ಲಿ ಸತ್ಯವೇ ಆಗಿದೆ. ಜೆಡಿಎಸ್ ಪಕ್ಷದಿಂದ ಸಿದ್ದರಾಮಯ್ಯ ಅವರು ಎಲ್ಲವನ್ನು ಪಡೆದುಕೊಂಡು ಕಾಂಗ್ರೆಸ್ ಸೇರುವ ಮೂಲಕ ಮೊದಲು ಆಪರೇಷನ್ ಸಂಸ್ಕೃತಿ ಜಾರಿ ಮಾಡಿ ಜನಕರಾಗಿದ್ದಾರೆ. ಬಿಎಸ್‍ವೈ ಅವರ ಮೇಲೆ ಆರೋಪ ಮಾಡುವ ಮುನ್ನ ಸಿದ್ದರಾಮಯ್ಯ ಅವರು ಎಷ್ಟು ಹಣ ಪಡೆದು ಕಾಂಗ್ರೆಸ್‍ಗೆ ಬಂದಿದ್ದರು ಎಂದು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.


‘ದೇವೇಗೌಡರಿಗೆ ಟೋಪಿ ಹಾಕಿ ಕಾಂಗ್ರೆಸ್‍ಗೆ ಬಂದ ಸಿದ್ದರಾಮಯ್ಯ ಅವರು ಸತ್ಯಾಹರಿಶ್ಚಂದ್ರರಂತೆ ಮಾತನಾಡುತ್ತಿದ್ದಾರೆ. ಅವರಿಗೆ ಯಡಿಯೂರಪ್ಪ ಅವರ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ. ಸದನದಲ್ಲಿ ತನಿಖೆಯನ್ನು ಎಸ್‍ ಐಟಿಗೆ ನೀಡುವ ತೀರ್ಮಾನ ಮಾಡಿದ ವೇಳೆ ವಿರೋಧ ವ್ಯಕ್ತಪಡಿಸಿದ್ದೇವೆ. ಸದನ ಸಮಿತಿ ಅಥವಾ ನ್ಯಾಯಾಂಗ ತನಿಖೆಗೆ ಮೂಲಕವೇ ಪ್ರಕರಣದ ವಿಚಾರಣೆ ನಡೆಸಬೇಕು ಎಂಬುವುದು ನಮ್ಮ ಒತ್ತಾಯವಾಗಿದೆ’ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿವನ ಹಾಡು ಹಾಡುವ ಈ ಮಗುವಿನ ವಿಡಿಯೋ ನೋಡಿದ್ರೆ ನಗು ಬರುತ್ತೆ

Karnataka Rains: ವೀಕೆಂಡ್ ನಲ್ಲಿ ಮಳೆ ಬರಲಿದೆಯಾ ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿರಾ ಗಾಂಧಿ ದಾಖಲೆ ಹಿಂದಿಕ್ಕಿ ದೀರ್ಘಾವಧಿ ಪ್ರಧಾನಿ ಹೆಗ್ಗಳಿಕೆಗೆ ಪಾತ್ರವಾದ ನರೇಂದ್ರ ಮೋದಿ

ಉಡುಪಿಯಲ್ಲಿ ಮುಂದಿನ 2 ದಿನ ಭಾರೀ ಗಾಳಿ ಮಳೆ, ರೆಡ್ ಅಲರ್ಟ್ ಘೋಷಣೆ

ಪರಿಷ್ಕೃತ ಶಾಲಾ ಸಮಯವನ್ನು ಮುಂದುವರೆಸುವಂತೆ ಕೇರಳ ಸರ್ಕಾರ ಸೂಚನೆ

ಮುಂದಿನ ಸುದ್ದಿ
Show comments