Webdunia - Bharat's app for daily news and videos

Install App

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Sampriya
ಭಾನುವಾರ, 15 ಜೂನ್ 2025 (13:45 IST)
Photo Courtesy X
ಬೆಂಗಳೂರು: ಇಸ್ರೇಲ್ ಹಾಗೂ ಇರಾನ್ ನಡುವೆ ದಾಳಿ- ಪ್ರತಿದಾಳಿ ತೀವ್ರಗೊಂಡ ಬೆನ್ನಲ್ಲೇ ವಿಮಾನಗಳ ಹಾರಾಟ ಸ್ಥಗಿತಗೊಳಿಸಲಾಗಿದೆ. ಹೀಗಾಗಿ, ಅಧ್ಯಯನ ಪ್ರವಾಸಕ್ಕೆಂದು ಇಸ್ರೇಲ್‌ಗೆ ತೆರಳಿದ್ದ 18 ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಇಸ್ರೇಲ್‌ನಲ್ಲಿದ್ದ ಕನ್ನಡಿಗರ ತಂಡ ಶುಕ್ರವಾರ ಬೆಂಗಳೂರಿಗೆ ವಾಪಸ್ ಆಗಬೇಕಿತ್ತು. ಆದರೆ ಇಸ್ರೇಲ್ -ಇರಾನ್ ಸಂಘರ್ಷದ ಪರಿಣಾಮ ದಿಢೀರ್ ವಿಮಾನ ಹಾರಾಟ ಸ್ಥಗಿತಗೊಳಿಸಿದ ಹಿನ್ನೆಲೆ ಬಿ ಪ್ಯಾಕ್ ಎನ್‌ಜಿಒ ತಂಡ ಇಸ್ರೇಲ್ ರಾಜಧಾನಿ ಟೆಲ್ ಅವೀವ್‌ನಲ್ಲಿ ಸಿಲುಕಿಕೊಂಡಿದೆ.  

ಇಸ್ರೇಲ್ ಹಾಗೂ ಇರಾನ್ ನಡುವೆ ದಾಳಿ- ಪ್ರತಿದಾಳಿ ತೀವ್ರಗೊಂಡ ಬೆನ್ನಲ್ಲೇ ವಿಮಾನಗಳ ಹಾರಾಟ ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆ 61 ಮಂದಿ ಭಾರತೀಯರು ಜಾರ್ಜಿಯಾದಲ್ಲಿ ಸಿಲುಕಿದ್ದಾರೆ. ರಾಜಸ್ಥಾನದ 61 ಮಂದಿಯ ತಂಡ ವೃತ್ತಿ ಕೌಶಲ್ಯ ಹೆಚ್ಚಿಸಿಕೊಳ್ಳುವ ಕಾರ್ಯಕ್ರಮಕ್ಕೆ ಜೂನ್ 8ರಂದು ತೆರಳಿದ್ದರು. 

ಜೂನ್ 13ರಂದು ಶಾರ್ಜಾ ಮೂಲಕ ಭಾರತಕ್ಕೆ ವಾಪಸ್ ಆಗಬೇಕಿತ್ತು. ವಿಮಾನ ಸ್ಥಗಿತಗೊಂಡ ಹಿನ್ನೆಲೆ ಅಲ್ಲೇ ಉಳಿದುಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ತುರ್ತಾಗಿ ತಮಗೆ ಸಹಾಯ ಮಾಡುವಂತೆ ಕೋರಿ ಭಾರತ ಸರ್ಕಾರಕ್ಕೆ ಭಾರತೀಯ ತಂಡ ಮನವಿ ಮಾಡಿದೆ. ಭಾರತಕ್ಕೆ ಸುರಕ್ಷಿತವಾಗಿ ಕರೆಸಿಕೊಳ್ಳುವಂತೆ ಕೇಂದ್ರ ಸರ್ಕಾರವನ್ನು ಕೋರಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

ಮುಂದಿನ ಸುದ್ದಿ
Show comments