ಪ್ರಧಾನಿ ನರೇಂದ್ರ ಮೋದಿ 51,000ಕ್ಕೂ ಹೆಚ್ಚು ಜನರಿಗೆ ರೋಜ್‌ಗಾರ್ ಮೇಳದ ಅಡಿಯಲ್ಲಿ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರವನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿತರಿಸಿದ್ದಾರೆ. ದೇಶಾದ್ಯಂತ 45 ಸ್ಥಳಗಳಲ್ಲಿ ರೋಜ್‌ಗಾರ್ ಮೇಳ ನಡೆಯಲಿದೆ ಎಂದು ಪ್ರಧಾನಮಂತ್ರಿಗಳ ಕಚೇರಿ ತಿಳಿಸಿದೆ. ಇನ್ನು ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು, ಅರೆಸೇನಾ ಪಡೆಗಳಲ್ಲಿನ ನೇಮಕಾತಿ ಪ್ರಕ್ರಿಯೆಯನ್ನು ಸರಳೀಕರಿಸಲಾಗಿದ್ದು, ನೇಮಕಾತಿಯ ಸಮಯವನ್ನು ಕಡಿಮೆಗೊಳಿಸಲಾಗಿದೆ ಎಂದು ಅವರು ಹೇಳಿದರು. ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ನಮ್ಮ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ರೋಜ್‌ಗಾರ್ ಮೇಳ ಒಂದು ಪ್ರಮುಖ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.