Publish Date: Wed, 13 Apr 2022 (21:00 IST)
Updated Date: Wed, 13 Apr 2022 (21:23 IST)
ಸಚಿವ ಕೆ.ಎಸ್ ಈಶ್ವರಪ್ಪ ರಾಜಕೀಯ ಪಿತೂರಿಗೆ ಬಲಿಯಾಗಿದ್ದಾರೆ. ಎಲ್ಲವೂ ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ ಎಂದು ಮೈಸೂರಿನಲ್ಲಿ ಸಚಿವ ಕೆ ಗೋಪಾಲಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಗೋಪಾಲಯ್ಯ ಅವರು, ಈಶ್ವರಪ್ಪ ರಾಜಕೀಯ ಪಿತೂರಿಗೆ ಬಲಿಯಾಗಿದ್ದಾರೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗುತ್ತಿಗೆದಾರನೊಬ್ಬ ದೆಹಲಿಗೆ ಹೋಗಿದ್ದು ಯಾಕೆ? ಆತನಿಗೆ ಟಿಕೆಟ್ ಬುಕ್ ಮಾಡಿದ್ದು ಯಾರು? ಯಾರ ಅಕೌಂಟ್ನಿಂದ ಟಿಕೆಟ್ ಬುಕ್ ಆಗಿದೆ? ಎಲ್ಲವೂ ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ ಎಂದು ತಿಳಿಸಿದರು.
ಇನ್ನೂ ಮುಖ್ಯಮಂತ್ರಿಗಳು ಉಡುಪಿಗೆ ಹೋದಾಗ ಮೃತ ಸಂತೋಷ್ ಯಾಕೆ ಅಲ್ಲಿಗೆ ಹೋಗಿದ್ದರು. ಸಂತೋಷ್ ಜೊತೆ ಹೋಗಿದ್ದ ಸ್ನೇಹಿತರು ಎಲ್ಲಿಗೆ ಹೋದರು? ಎಂಬುದರ ಬಗ್ಗೆ ತನಿಖೆಯಾಗಬೇಕಿದೆ ಎಂದು ತಿಳಿಸಿದ್ದಾರೆ.
ಈಶ್ವರಪ್ಪ ಜೊತೆ ನಾವಿದ್ದೇವೆ
ಈಗಾಗಲೇ ಸಚಿವ ಈಶ್ವರಪ್ಪ ವಿರುದ್ಧ ಉಡುಪಿಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೂ ನಾವು ಈಶ್ವರಪ್ಪನವರ ಜೊತೆ ಇದ್ದೇವೆ ಎಂದು ತಿಳಿಸಿದ್ದಾರೆ