ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ನಡೆದ ಐಟಿ ದಾಳಿ ಕಪ್ಪುಹಣ, ಭ್ರಷ್ಟಾಚಾರದ ವಿರುದ್ಧವಾಗಿದೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರ ಭ್ರಷ್ಟಾಚಾರ ಮತ್ತು ಕಪ್ಪುಹಣದ ವಿರುದ್ಧ ದಾಳಿ ನಡೆಸುತ್ತಿರುವುದರಿಂದ ಅದನ್ನು ಯಾರೂ ವಿರೋಧಿಸಬಾರದು ಎಂದು ತಿಳಿಸಿದ್ದಾರೆ.
ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ನಡೆದ ಆದಾಯ ತೆರಿಗೆ ದಾಳಿ ಅವರ ವ್ಯವಹಾರಕ್ಕೆ ಸಂಬಂಧಿಸಿದ್ದಾಗಿದೆ. ಅವರ ನಿವಾಸದ ಮೇಲೆ ನಡೆದ ಐಟಿ ದಾಳಿಗೂ ರೆಸಾರ್ಟ್‌ನಲ್ಲಿರುವ ಗುಜರಾತ್ ಕಾಂಗ್ರೆಸ್ ಶಾಸಕರಿಗೂ ಯಾವುದೇ ಸಂಬಂಧವಿಲ್ಲ ಎಂದರು.
ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ನಡೆದ ಐಟಿ ದಾಳಿಯಲ್ಲಿ ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕೈವಾಡವಿದೆ ಎನ್ನುವ ಕಾಂಗ್ರೆಸ್ ಆರೋಪದಲ್ಲಿ ಸತ್ಯಾಂಶವಿಲ್ಲ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.