Publish Date: Fri, 04 Aug 2017 (12:33 IST)
Updated Date: Fri, 04 Aug 2017 (12:34 IST)
ಆದಾಯ ತೆರಿಗೆ ಅಧಿಕಾರಿಗಳ ಸತತ ಮೂರನೇ ದಿನದ ವಿಚಾರಣೆಯಿಂದಾಗಿ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ಮೂಲಗಳು ತಿಳಿಸಿವೆ.
ಸಚಿವ ಶಿವಕುಮಾರ್ ಆರೋಗ್ಯದಲ್ಲಿ ಏರಪೇರಾಗಿದ್ದರಿಂದ ಡಾ.ರಮಣ್ ರಾವ್ ನೇತೃತ್ವದ ತಂಡ ಅವರ ನಿವಾಸಕ್ಕೆ ಭೇಟಿ ನೀಡಿ ಚಿಕಿತ್ಸೆ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಸದಾಶಿವನಗರದ ನಿವಾಸಕ್ಕೆ ಆಗಮಿಸಿದ ವೈದ್ಯರ ತಂಡ ಸಚಿವ ಶಿವಕುಮಾರ್ ಬಿಪಿ ಸೇರಿದಂತೆ ಆರೋಗ್ಯದ ಬಗ್ಗೆ ತಪಾಸಣೆ ನಡೆಸಿದ್ದಾರೆ. ತಪಾಸಣೆಯ ನಂತರ ಮಾಧ್ಯಮಗಳಿಗೂ ಯಾವುದೇ ಪ್ರತಿಕ್ರಿಯೆ ನೀಡದೆ ವಾಪಸಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ದಾಳಿ ನಡೆಸಿದ ಆದಾಯ ತೆರಿಗೆ ಅಧಿಕಾರಿಗಳು ಕಳೆದ ಎರಡು ದಿನಗಳಿಂದ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.