Publish Date: Tue, 31 Jan 2023 (20:25 IST)
Updated Date: Tue, 31 Jan 2023 (20:30 IST)
ಬೆಂಗಳೂರಿನಲ್ಲಿ ಚಿನ್ನದ ವ್ಯಾಪಾರಿಗಳಿಗೆ ಬೆಳ್ಳಂಬೆಳಗ್ಗೆ ಐಟಿ ಶಾಕ್ ನೀಡಿದೆ. ತೆರಿಗೆ ವಂಚನೆ ಮಾಡಿ ವ್ಯಾಪಾರ ನಡೆಸ್ತಿದ್ದ ಚಿನ್ನದ ವ್ಯಾಪಾರಿಗಳಿಗೆ IT ಶಾಕ್ ನೀಡಿದ್ದು, ದಾಳಿ ನಡೆಸಿದೆ. ಬೆಂಗಳೂರಿನ ಸುಮಾರು 25ಕ್ಕೂ ಹೆಚ್ಚು ಜ್ಯುವೆಲ್ಲರಿ ಶಾಪ್ ಗಳ ಮೇಲೆ IT ದಾಳಿ ನಡೆಸಿದೆ. ಜಯನಗರ, ಯಶವಂತಪುರ, ಬಸವನಗುಡಿ, ಚಿಕ್ಕಪೇಟೆ ಸೇರಿದಂತೆ ಹಲವು ಸ್ಥಳಗಳಲ್ಲಿ IT ಅಧಿಕಾರಿಗಳು ಶೋಧ ನಡೆಸಿದ್ದಾರೆ. ಜ್ಯುವೆಲ್ಲರಿ ಶಾಪ್ ಮಾಲೀಕರ ಮನೆ ಮೇಲೂ ದಾಳಿ ಮಾಡಿ ಶೋಧ ನಡೆಸಲಾಗಿದೆ.