Webdunia - Bharat's app for daily news and videos

Install App

ಸಚಿವ ಪುಟ್ಟರಾಜು ಮನೆ ಮೇಲೆ ಐಟಿ ದಾಳಿ; ಇದರ ಹಿಂದೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಕೈವಾಡವಿದೆ ಎಂದ ಸಚಿವ

Webdunia
ಗುರುವಾರ, 28 ಮಾರ್ಚ್ 2019 (10:33 IST)
ಮಂಡ್ಯ :, ಸಣ್ಣ ನೀರಾವರಿ ಮತ್ತು ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವ ಸಿಎಸ್ ಪುಟ್ಟರಾಜು ಮತ್ತು ಅವರ ಸಂಬಂಧಿಕರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.


ಪುಟ್ಟರಾಜು ಸ್ವಗ್ರಾಮ ಚಿನಕುರಳಿಯಲ್ಲಿರುವ ಮನೆ ಮೇಲೆ ಬೆಳಗ್ಗೆ ಐಟಿ ದಾಳಿ ನಡೆದಿದೆ. ಮೈಸೂರಿನ ವಿಜಯನಗರದಲ್ಲಿರುವ ಪುಟ್ಟರಾಜು ಅಣ್ಣನ ಮಗ ಅಶೋಕ್ ಮನೆ ಮೇಲೆಯೂ ದಾಳಿ ನಡೆದಿದೆ. ನಸುಕಿನ ಜಾವದಿಂದ ಪುಟ್ಟರಾಜು ನಿವಾಸ, ಸಂಬಂಧಿಗಳ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.


ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸಚಿವ ಸಿ.ಎಸ್. ಪುಟ್ಟರಾಜು, ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ದೂರು ನೀಡಿದ ಬಳಿಕ ಈ ದಾಳಿ ನಡೆಸಲಾಗಿದೆ. ಇದರ ಹಿಂದೆ ಅವರ ಕೈವಾಡವಿದೆ ಎಂದು ಪರೋಕ್ಷವಾಗಿ ಸುಮಲತಾ ಅವರ ಮೇಲೆ ಆರೋಪ ಮಾಡಿದ್ದಾರೆ.


ಈ ದಾಳಿಯನ್ನು ತಮ್ಮ ಪಕ್ಷ ಸಮರ್ಥವಾಗಿ ಎದುರಿಸಲಿದ್ದು, ಆದಾಯ ತೆರಿಗೆ ಇಲಾಖೆಯನ್ನು ಬಳಸಿಕೊಂಡು ನಮ್ಮನ್ನು ಹತ್ತಿಕ್ಕುವ ಪ್ರಯತ್ನ ನಡೆಸುತ್ತಿರುವ ಕೇಂದ್ರ ಸರ್ಕಾರದ ಕುತಂತ್ರದ ವಿರುದ್ಧ ಹೋರಾಟ ನಡೆಸುತ್ತೇವೆ ಎಂದು ಗುಡುಗಿರುವ ಸಿ.ಎಸ್. ಪುಟ್ಟರಾಜು, ಇಂತಹ ದಾಳಿಗಳಿಂದ ನಮ್ಮನ್ನು ಹೆದರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments