ಬೆಂಗಳೂರು : ಡೋಲೋ 650 ಮಾತ್ರೆ ತಯಾರಿಕಾ ಸಂಸ್ಥೆ ಮೈಕ್ರೋ ಲ್ಯಾಬ್ಸ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕೋವಿಡ್ ಸಂದರ್ಭದಲ್ಲಿ ಮೈಕ್ರೋ ಲ್ಯಾಬ್ಸ್ ನೂರಾರು ಕೋಟಿಯ ಡೋಲೋ -650 ಮಾತ್ರೆ ಮಾರಾಟ ಮಾಡುವ ಮೂಲಕ ಅತೀ ಹೆಚ್ಚು ವ್ಯಾಪಾರ ವಹಿವಾಟು ನಡೆಸಿತ್ತು.
ಆ ವೇಳೆ ತೆರಿಗೆ ವಂಚಿಸಿದ್ದ ಆರೋಪ ಹಿನ್ನೆಲೆ ರೇಸ್ ಕೋರ್ಸ್ ರಸ್ತೆಯಲ್ಲಿರುವ ಮೈಕ್ರೋ ಲ್ಯಾಬ್ಸ್ ಕೇಂದ್ರ ಕಚೇರಿ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಚೇರಿ ಅಲ್ಲದೇ ಸಿಎಂಡಿ ದಿಲೀಪ್ ಸುರಾನಾ, ಡೈರೆಕ್ಟರ್ ಆನಂದ್ ಸುರಾನ ನಿವಾಸದ ಮೇಲೂ ದಾಳಿ ನಡೆಸಲಾಗಿದೆ.