ಬೆಂಗಳೂರು: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಈ ಪ್ರಕರಣ ಸಂಬಂಧ ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ಅವರು, ನನಗೆ ಈ ಪ್ರಕರಣದ ಬಗ್ಗೆ ಈಗಷ್ಟೇ ತಿಳಿಯಿತು. ನನಗೂ ಅದಕ್ಕೂ ಯಾವುದೇ ಸಂಬಂಧವಿಲ್ಲ.
ಕುಸುಮಾ ಅವರನ್ನು ಶಾಸಕಿಯನ್ನಾಗಿ ಮಾಡಲು ಡಿಕೆ ಸುರೇಶ್ ಮತ್ತು ಡಿಕೆ ಶಿವಕುಮಾರ್ ಈ ರೀತಿ ದಾಳಿ ನಡೆಸಿದ್ದಾರೆಂಬ ಮುನಿರತ್ನ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ನನಗೂ ಇದಕ್ಕೂ ಸಂಬಂಧವಿಲ್ಲ ಎಂದಿದ್ದಾರೆ.
ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಮುನಿರತ್ನ ವಿರುದ್ಧ ಕುಸುಮಾ ಅವರು ಎರಡು ಬಾರಿ ಸೋಲು ಅನುಭವಿಸಿದ್ದರು. ಕುಸುಮಾ ಅವರು ಮಾಜಿ ಸಂಸದ ಡಿಕೆ ಸುರೇಶ್ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದಾರೆ.