ಅದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ: ಪ್ರಮೋದಾದೇವಿ ಒಡೆಯರ್

Sampriya
ಶನಿವಾರ, 30 ಆಗಸ್ಟ್ 2025 (15:26 IST)
ಮೈಸೂರು: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು ಚಾಮುಂಡೇಶ್ವರಿ ದೇವಿ ಸುತ್ತಾ ನಡೆದಿರುವ ಬೆಳವಣಿಗೆಯಿಂದ ನೋವಾಗಿದೆ ಎಂದು ರಾಜವಶಂಸ್ಥೆ ಪ್ರಮೋದಾದೇವಿ ಒಡೆಯರ್ ಹೇಳಿದರು. 

ಇಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಾಮುಂಡಿ ಯದುವಂಶದ ಮನೆ ದೇವರು. ನಮ್ಮ ಕುಲದೇವಿ. ಯದುವಂಶಕ್ಕೆ ಚಾಮುಂಡಿ ದೇವಿ ಧಾರ್ಮಿಕ ತಾಯಿ ಇದ್ದಂತೆ. ದೇವಸ್ಥಾನದಲ್ಲಿ ಹಿಂದೂ ಧಾರ್ಮಿಕ ವಿಧಿ-ವಿಧಾನದಂತೆಯೇ ಪೂಜೆ ನಡೆಯುತ್ತದೆ ಎಂದರು.

ರಾಜಕಾರಣಿಗಳು ಏನು ಹೇಳಿದರು, ಅವರು ಹೇಳಿದಂತೆಲ್ಲಾ ಆಗುವುದಿಲ್ಲ ಎಂದು ಡಿಕೆ ಶಿವಕುಮಾರ್ ಹೆಸರು ಹೇಳದೆ ಪ್ರತಿಕ್ರಿಯಿಸಿದರು. 

ನಮ್ಮ ಮನೆತನ ಹಾಗೂ ದೇವಸ್ಥಾನದ ವಿಚಾರದಲ್ಲಿ ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತಿದ್ದೇವೆ. ಚಾಮುಂಡಿ ಬೆಟ್ಟದ ದೇವಸ್ಥಾನಕ್ಕೆ ಸಂಬಂಧಿಸಿ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಿದ್ದರೂ ಅದು ಅಧಿಕೃತವಲ್ಲ. ನ್ಯಾಯಾಲಯದ ಆದೇಶ ಬಂದ ಮೇಲಷ್ಟೆ ಎಲ್ಲವೂ ಸ್ಪಷ್ಟ ಆಗುತ್ತದೆ ಎಂದು ಹೇಳಿದರು.

‘70 ವರ್ಷಗಳಿಂದ ಈ ಹೋರಾಟ ನಡೆದಿದ್ದು, ಎಲ್ಲವೂ ನ್ಯಾಯಾಲಯದಲ್ಲಿದೆ’ ಎಂದರು.

‘ದಸರಾ ಉದ್ಘಾಟಕರ ವಿಚಾರದಲ್ಲಿ ನನ್ನ ಅಭಿಪ್ರಾಯವೇನೂ ಇಲ್ಲ. ಕರೆದವರು, ಕರೆಸಿಕೊಂಡವರಿಗಷ್ಟೇ ಅದು ಗೊತ್ತು. ಸರ್ಕಾರದ ದಸರಾ ನಮ್ಮ ಪರಂಪರೆಯ ಭಾಗವಲ್ಲ. ನಮ್ಮ ದಸರಾ ಖಾಸಗಿಯಾಗಿಯೇ ನಡೆಯುತ್ತದೆ. ಸರ್ಕಾರದವರು ಅವರಿಗೆ ಬೇಕಾದ ರೀತಿ ದಸರಾ ಮಾಡುತ್ತಾರೆ. ಅದಕ್ಕೂ-ನಮಗೂ ಸಂಬಂಧ ಇಲ್ಲ’ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ನಿವಾಸಿಗಳಿಗೆ ಗುಡ್‌ನ್ಯೂಸ್‌: ನ.1ರಿಂದಲೇ ಬಿಖಾತಾದಿಂದ ಎ ಖಾತಾ ಪರಿವರ್ತನೆ ಅಭಿಯಾನ

ಜಾತಿವಾರು ಸಮೀಕ್ಷೆಗೆ ಮಾಹಿತಿ ನೀಡಲು ನಾರಾಯಣಮೂರ್ತಿ ಕುಟುಂಬ ಹಿಂದೇಟು: ಕಾರಣ ಏನು ಗೊತ್ತಾ

ಕೊಪ್ಪಳದಲ್ಲಿ ರೈತರಿಗೆ ಸಲಹೆ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್, ಹೇಳಿದ್ದೇನು ಗೊತ್ತಾ

ಕೇದಾರನಾಥ ಯಾತ್ರಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಅದಾನಿ ಸಮೂಹ, ಇಲ್ಲಿದೆ ಮಾಹಿತಿ

ನನ್ನನ್ನು ಸರ್ ಎಂದು ಕರೆಯಬೇಡಿ, ಬಿಹಾರದ ಮಹಿಳಾ ಕಾರ್ಯಕರ್ತೆಗೆ ಮೋದಿ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments