ಚುನಾವಣೆಗೆ ಸ್ಪರ್ಧಿಸುವುದು ನಿಶ್ಚಿತ

Webdunia
ಶುಕ್ರವಾರ, 14 ಏಪ್ರಿಲ್ 2023 (18:54 IST)
ನನಗೆ ಬಿಜೆಪಿ ಟಿಕೆಟ್‌ ಕೈತಪ್ಪಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ C.T. ರವಿ ಮತ್ತು ಅವರ ಪಟಾಲಂ ಷಡ್ಯಂತ್ರವೇ ಕಾರಣ ಎಂದು ಮೂಡಿಗೆರೆ ಮೀಸಲು ಕ್ಷೇತ್ರದ ಶಾಸಕ M.P. ಕುಮಾರಸ್ವಾಮಿ ದೂರಿದ್ದಾರೆ. ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕಚೇರಿಗೆ ತೆರಳಿ ರಾಜೀನಾಮೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಪಕ್ಷದ ಕಚೇರಿಗೆ ರಾಜೀನಾಮೆ ಪತ್ರ ತಲುಪಿಸಿದ್ದೇನೆ. ಶಾಸಕ ಸ್ಥಾನದ ರಾಜೀನಾಮೆ ಪತ್ರವನ್ನು ಸ್ಪೀಕರ್‌ಗೆ ಫ್ಯಾಕ್ಸ್‌ ಕಳಿಸಿದ್ದೇನೆ ಎಂದು ತಿಳಿಸಿದರು. ಮತದಾರರು ಮತ್ತು ಬೆಂಬಲಿಗರೊಂದಿಗೆ ಚರ್ಚಿಸಿ ಮುಂದಿನ ನಡೆ ನಿರ್ಧರಿಸುತ್ತೇನೆ. C.T. ರವಿ ಅವರಿಗೆ ನಿಷ್ಠರಾಗಿ ಹೋಗಬೇಕು, ಅದು ನನ್ನಿಂದ ಸಾಧ್ಯವಿಲ್ಲ. ರಾಜ್ಯದಲ್ಲಿ ಬಿಜೆಪಿ ನೆಲಕಚ್ಚಲು C.T. ರವಿ ಕಾರಣ ಆಗುತ್ತಾರೆ. ದೆಹಲಿಯಲ್ಲಿ ಶಾಸಕ C.T. ರವಿ ಕಣ್ಣಾಮುಚ್ಚಾಲೆ ಆಟ ಆಡಿದ್ದಾರೆ. ಹುಚ್ಚು ನಾಯಿ ಓಡಿಸುವ ರೀತಿಯಂತೆ ಅವರ ಜನಾಂಗದವರನ್ನು ನನ್ನ ವಿರುದ್ದ ಎತ್ತಿ ಕಟ್ಟಿ ಓಡಿಸಿದರು. ಕ್ಷೇತ್ರದ ಜನರು ಅವರಿಗೆ ಬುದ್ಧಿಕಲಿಸುತ್ತಾರೆ. ಜನರ ಸೇವೆ ಮಾಡುವ ಶಕ್ತಿ ಇನ್ನೂ ಇದೆ ನನಗೇನೂ ವಯಸ್ಸಾಗಿಲ್ಲ ಎಂದು ಆಕ್ರೋಶ ಹೊರ ಹಾಕಿದರು. ಚುನಾವಣೆಗೆ ಸ್ಪರ್ಧಿಸುವುದು ನಿಶ್ಚಿತ, ಮೂಡಿಗೆರೆ ಕ್ಷೇತ್ರದಲ್ಲಿ ನಾನೇ ಮುಂದಿನ ಶಾಸಕ ಎಂದು ತಿಳಿಸಿದರು.
==========

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭ ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸ್ಕೆಂಚ್ ಹಾಕಿದ್ದ ಐಸಿಎಸ್ ಉಗ್ರರು ಅರೆಸ್ಟ್‌

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಪ್ರದೀಪ್ ಈಶ್ವರ್ ಎಚ್ಚರಿಕೆಯಿಂದ ಇರು ಮಗನೇ..: ಪ್ರತಾಪ್ ಸಿಂಹ ವಾರ್ನಿಂಗ್

ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

ಮುಂದಿನ ಸುದ್ದಿ
Show comments