Webdunia - Bharat's app for daily news and videos

Install App

ಗ್ಯಾರಂಟಿ ಘೋಷಿಸಿದ್ದು ಸಂತೋಷ, ಇದರಿಂದ ಕರ್ನಾಟಕ ದಿವಾಳಿಯಾಗದಿರಲಿ : ಸಿ.ಟಿ ರವಿ

Webdunia
ಶನಿವಾರ, 3 ಜೂನ್ 2023 (13:48 IST)
ಬೆಂಗಳೂರು : ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಘೋಷಣೆ ಮಾಡಿರುವುದನ್ನ ನಾನು ಸ್ವಾಗತ ಮಾಡುತ್ತೇನೆ. ಆದ್ರೆ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗದಿರಲಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.
 
ಕಾಂಗ್ರೆಸ್ ಗ್ಯಾರಂಟಿ ಜಾರಿ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನವರು ತಮ್ಮ ಪ್ರಣಾಳಿಕೆಯಲ್ಲಿ ಕುಟುಂಬದ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ಕೊಡ್ತೀವಿ ಅಂತಾ ಹೇಳಿದ್ದಾರೆ. ಜಮೀರ್ ಅಹ್ಮದ್ ಖಾನ್ ಅವರೂ ಇತ್ತೀಚೆಗೆ ಕ್ಷೇತ್ರಕ್ಕೆ ಭೇಟಿ ನೀಡಿದ್ದಾಗ ಮನೆಯಲ್ಲಿ 7 ಜನ ಇದ್ದರೆ, 70 ಕೆ.ಜಿ ಅಕ್ಕಿ ಸಿಗುತ್ತೆ ಅಂತಾ ಹೇಳಿದ್ದಾರೆ. ಆದ್ರೆ ಈಗ ಒಂದು ಕುಟುಂಬಕ್ಕೆ 10 ಕೆಜಿ ಅಕ್ಕಿ ಅಂತಾ ಹೇಳ್ತಿದ್ದಾರೆ, ಇದನ್ನು ಸ್ಪಷ್ಟಪಡಿಸಬೇಕು ಎಂದಿದ್ದಾರೆ.

ವೆನಿಜುವೆಲಾ ಎನ್ನುವ ರಾಷ್ಟ್ರದ ಇತಿಹಾಸ ನಮ್ಮ ಕಣ್ಣಮುಂದೆ ಇದೆ. ಅಲ್ಲಿಯೂ ಇದೇ ರೀತಿ ಕೊಡುತ್ತಾ ರಾಷ್ಟ್ರವೇ ದಿವಾಳಿ ಆಗಿಹೋಯ್ತು. ಅದೇ ರೀತಿ ನಮ್ಮ ರಾಜ್ಯ ದಿವಾಳಿಯಾಗಬಾರದು. ತಾವು ಬುದ್ಧಿವಂತರಿದ್ದೀರಿ, ಹಣ ಜೋಡಿಸುವ ಸಾಮರ್ಥ್ಯವಿದೆ, ಅನುಭವ ಇದೆ. ಮೊದಲು ರಾಜ್ಯದ ಆರ್ಥಿಕ ಸ್ಥಿತಿಗತಿಗೆ ಸಂಬಂಧಿಸಿದಂತೆ ಶ್ವೇತಪತ್ರ ಹೊರಡಿಸಿ ಎಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments