Publish Date: Thu, 20 Sep 2018 (20:27 IST)
Updated Date: Thu, 20 Sep 2018 (20:29 IST)
ಏನೇ ಮಾಡಿದರೂ ರಾಜ್ಯದ ಸಮ್ಮಿಶ್ರ ಸರಕಾರವನ್ನು ಬಿಜೆಪಿಯವರು ಉರುಳಿಸುವುದು ಸಾಧ್ಯವಾಗುವುದಿಲ್ಲ ಎಂದು ಸಿಎಂ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ಸೆಳೆಯುವ ಪ್ರಯತ್ನವನ್ನು ಬಿಜೆಪಿಯವರು ಮುಂದುವರಿಸಿದ್ದಾರೆ ಎಂದು ಹರಿಹಾಯ್ದರು.
ಶಾಸಕರ ಜತೆ ಎಲ್ಲೆಲ್ಲಿ ಮಾತನಾಡುತ್ತಿದ್ದಾರೆ ಎಂಬ ಮಾಹಿತಿ ಇದೆ. ಸೂಕ್ತ ಸಮಯದಲ್ಲಿ ಭಾರತೀಯ ಜನತಾ ಪಕ್ಷದವರ ಇತಿಹಾಸ ಬಯಲಿಗೆ ಎಳೆಯುತ್ತೇನೆ ಎಂದು ಎಚ್ಚರಿಸಿದ್ದಾರೆ.