Webdunia - Bharat's app for daily news and videos

Install App

ಕ್ಷಮೆ ಕೇಳದೆ ರಾಗಾ ಮಾತನಾಡಲು ಅವಕಾಶವಿಲ್ಲ

Webdunia
ಶುಕ್ರವಾರ, 17 ಮಾರ್ಚ್ 2023 (19:00 IST)
ಲಂಡನ್‌ನಲ್ಲಿ ಮಾಡಿರುವ ಭಾಷಣಕ್ಕೆ ಕ್ಷಮೆ ಕೇಳದ ಹೊರತು ರಾಹುಲ್‌ ಗಾಂಧಿ ಅವರಿಗೆ ಸಂಸತ್ತಿನಲ್ಲಿ ಮಾತನಾಡಲು ಅವಕಾಶ ನೀಡುವುದಿಲ್ಲ ಎಂದು BJP ಮೂಲಗಳು ತಿಳಿಸಿವೆ. ಲಂಡನ್‌ನ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯ ಸೇರಿ ಹಲವು ಕಾರ್ಯಕ್ರಮಗಳಲ್ಲಿ ರಾಹುಲ್‌ ಗಾಂಧಿ ಭಾರತವನ್ನು ಅವಮಾನಿಸುವ ರೀತಿಯಲ್ಲಿ ಮಾತನಾಡಿದ್ದಾರೆ. ಹೀಗಾಗಿ ಅವರು ಸದನದ ಒಳಗೂ, ಹೊರಗೂ ಕ್ಷಮೆ ಕೇಳಬೇಕು ಎಂದು ಕಳೆದ ಐದು ದಿನಗಳಿಂದ ಉಭಯ ಸದನದಲ್ಲಿ ಆಡಳಿತಾರೂಢ BJP ಆಗ್ರಹಿಸುತ್ತಿದೆ. ಇದೇ ವಿಷಯ ಸಂಬಂಧ ಕಲಾಪಗಳು ನಡೆಯದೇ ಮುಂದೂಡಲಾಗುತ್ತಿದೆ. ವಿವಾದದ ಬಳಿಕ ಗುರುವಾರ ಮೊದಲ ಬಾರಿ ಸಂಸತ್ತಿಗೆ ಆಗಮಿಸಿದ್ದ ರಾಹುಲ್‌ ಗಾಂಧಿ, ತನಗೆ ಮಾತನಾಡಲು ಅವಕಾಶ ನೀಡಬೇಕು ಎಂದು ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಲ್ಲಿ ಮನವಿ ಮಾಡಿಕೊಂಡಿದ್ದರು. ಶುಕ್ರವಾರ ಕೂಡ ಸಂಸತ್ತಿಗೆ ಆಗಮಿಸಿದ್ದರು. ಆದರೆ ಗದ್ದಲದ ನಡುವೆ ಅವರಿಗೆ ಮಾತನಾಡುವ ಅವಕಾಶ ಸಿಕ್ಕಿಲ್ಲ. ಸದ್ಯ ಮುಂದಿನ ವಾರಕ್ಕೆ ಸದನವನ್ನು ಮುಂದೂಡಲಾಗಿದೆ. ಅವರು ಕ್ಷಮೆ ಕೇಳದ ಹೊರತು ಸದನದಲ್ಲಿ ಮಾತನಾಡಲು ಅವಕಾಶ ಕೊಡಬಾರದು ಎಂದು ನಿರ್ಧರಿಸಲಾಗಿದೆ ಎಂದು BJP ಮೂಲಗಳು ಹೇಳಿವೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments