Publish Date: Sun, 29 Dec 2019 (09:58 IST)
Updated Date: Sun, 29 Dec 2019 (10:00 IST)
ದಾವಣಗೆರೆ : ಬಿಜೆಪಿಯವರು ಚುನಾವಣೆ ಬಂದಾಗ ಪಾಕಿಸ್ತಾನದ ಮೇಲೆ ಬಾಂಬ್ ಹಾಕುತ್ತಾರೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ವ್ಯಂಗ್ಯ ಮಾಡಿದ್ದಾರೆ.
ಸಿಎಎ ಖಂಡಿಸಿ ನಡೆದ ಸಮಾವೇಶದದಲ್ಲಿ ಮಾತನಾಡಿದ ಅವರು, ಚುನಾವಣೆಯ ಸಂದರ್ಭದಲ್ಲಿ ಮಾತ್ರ ಬಿಜೆಪಿ ಆಡಳಿತದಲ್ಲಿ ಪಾಕ್ ಮೇಲೆ ಬಾಂಬ್ ಹಾಕಿ ದಾಳಿ ಮಾಡುತ್ತಾರೆ. ಆಗ ಮಾತ್ರ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲು ಸಾಧ್ಯ ಎಂದು ಲೇವಡಿ ಮಾಡಿದ್ದಾರೆ.
ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಜಾರ್ಖಂಡ್ ಚುನಾವಣೆ ಒಳ್ಳೆ ಪಾಠ ಕಲಿಸಿದೆ. ಈಗಾಗಲೇ ಬಿಜೆಪಿ7 ರಾಜ್ಯ ಕಳೆದುಕೊಂಡಿದೆ. ಇಬ್ಬರ ಸರ್ವಾಧಿಕಾರಿ ಧೋರಣೆ ಹೆಚ್ಚು ದಿನ ನಡೆಯಲ್ಲ. ಈ ಕಾಯ್ದೆಯನ್ನ ವಾಪಾಸ್ ಪಡೆಯಲಿ ಎಂದು ಅವರು ಕಿಡಿಕಾರಿದ್ದಾರೆ.