Publish Date: Mon, 31 Jul 2023 (11:13 IST)
Updated Date: Mon, 31 Jul 2023 (12:15 IST)
ಕರ್ನಾಟಕದ ಕರಾವಳಿ ಭಾಗಗಳಲ್ಲಿ ಆಗಸ್ಟ್ 3ರ ನಂತರ ಮತ್ತೆ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಮಂಕಿ, ಮಾಣಿ, ಪುತ್ತೂರು, ಧರ್ಮಸ್ಥಳ, ಕ್ಯಾಸಲ್ ರಾಕ್, ಕುಂದಾಪುರ, ಸಿದ್ದಾಪುರ, ಕೊಲ್ಲೂರು, ಗೇರುಸೊಪ್ಪ, ಅಂಕೋಲಾ, ಶಿರಾಲಿ, ಮಂಗಳೂರು ವಿಮಾನ ನಿಲ್ದಾಣ, ಲಿಂಗನಮಕ್ಕಿ, ಶೃಂಗೇರಿ, ಉಪ್ಪಿನಂಗಡಿ, ಪಣಂಬೂರು, ಸುಳ್ಯ, ಬೆಳ್ತಂಗಡಿ, ಜೋಯಿಡಾ, ಕದ್ರಾ, ಕಾರವಾರ, ಗೋಕರ್ಣ, ಮಂಚಿಕೆರೆ, ಹೊನ್ನಾವರ, ಕುಮಟಾ, ಕೋಟ, ಕಾರ್ಕಳ, ಚಿತ್ತಾಪುರ, ಆಳಂದ, ಲೋಂಡಾ, ಶಹಪುರ, ತಾಳಗುಪ್ಪ, ಭಾಗಮಂಡಲ, ಜಯಪುರ, ಬಾಳೆಹೊನ್ನೂರು, ಕೊಪ್ಪ, ಕಮ್ಮರಡಿಯಲ್ಲಿ ಮಳೆಯಾಗಿದೆ.
ಕರಾವಳಿಯ ಬಹುತೇಕ ಕಡೆಗಳಲ್ಲಿ, ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.