Select Your Language

Notifications

webdunia
webdunia
webdunia
webdunia

ಡಿಕೆಶಿಯ ವಿಧಾನಸೌಧದ ಕಚೇರಿ ಮೇಲೂ ದಾಳಿ..?

ಡಿಕೆಶಿಯ ವಿಧಾನಸೌಧದ ಕಚೇರಿ ಮೇಲೂ ದಾಳಿ..?
ಬೆಂಗಳೂರು , ಗುರುವಾರ, 3 ಆಗಸ್ಟ್ 2017 (16:26 IST)
ನಿನ್ನೆ ಬೆಳಗ್ಗೆಯಿಂದ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರ ಮನೆ ಮೇಲೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ಇನ್ನಿಲ್ಲದಂತೆ ಶೋಧ ಕಾರ್ಯ ನಡೆಸುತ್ತಿದ್ದಾರೆ. ವಿಧಾನಸೌಧದಲ್ಲಿರುವ ಡಿ.ಕೆ. ಶಿವಕುಮಾರ್ ಮನೆ ಮೇಲೂ ಐಟಿ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಇತ್ತ, ಡಿ.ಕೆ. ಶಿವಕುಮಾರ್ ಅವರಿಗೆ ಸಂಬಂಧಿಸಿದ ಕಿಪಿಸಿಎಲ್ ಮತ್ತು ಕೆಪಿಟಿಸಿಎಲ್ ಮೆಲೂ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ಕೆಲ ಮಹತ್ವದ ದಾಖಲೆಗಳನ್ನ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ವಿಧಾನಸೌಧದ ಮೇಲೂ ದಾಳಿ ಮುನ್ಸೂಚನೆ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ಮೂರನೇ ಮಹಡಿಯ ಕೊಠಡಿ, ಕಾರ್ಯದರ್ಶಿ ಕೊಠಡಿಗಳಿಗೆ ಬಿಗಿ ಭದ್ರತೆ ಒದಗಿಸಲಾಗಿದೆ.

ಇತ್ತ, ಮೈಸೂರಿನಲ್ಲಿರುವ ಡಿಕೆಶಿ ಮಾವನ ಮನೆಯಲ್ಲೂ 33 ಗಂಟೆಗಳಿಂದ ವಿಚಾರಣೆ ನಡೆಯುತ್ತಿದೆ. ಡಿಕೆಶಿ ಅವರ ಮಾವ ತಿಮ್ಮಯ್ಯನವರ ಆಪ್ತ ಎಡ್ವಿನ್ ಅವರನ್ನ ಪೊಲೀಸರು ವಶಖ್ಕೆ ಪಡೆದಿದ್ದಾರೆ. ಇಬ್ಬರು ನಜರಬಾದ್ ಠಾಣೆ ಪೇದೆಗಳು ಎಡ್ವಿನ್`ನನ್ನ ವಶಕ್ಕೆ ಪಡೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಹಿಂದೂ ವಿದ್ಯಾರ್ಥಿಗಳಿಗೆ ನಮಾಜ ಮಾಡುವಂತೆ ಒತ್ತಾಯಿಸಿದ ಶಿಕ್ಷಕರು