Publish Date: Wed, 08 Nov 2017 (19:25 IST)
Updated Date: Wed, 08 Nov 2017 (19:27 IST)
ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವಂತೆ ಹೇಳಿದ್ದಾಗಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸೇರುವಂತೆ ಡಿಕೆಶಿಗೆ ಬ್ಲ್ಯಾಕ್‌ಮೇಲ್ ಮಾಡಲಾಗುತ್ತಿದೆ. ಅವರು ಮಣಿಯದಿದ್ದಾಗ ಅವರ ಮನೆಯ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ ಒತ್ತಡ ಹೇರಿದ್ದಾರೆ ಎಂದು ಕಿಡಿಕಾರಿದ್ದಾರೆ.
ವಿಪಕ್ಷಗಳ ನಾಯಕರುಗಳನ್ನು ಹೆದರಿಸಿ, ಬೆದರಿಸಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವಂತೆ ಒತ್ತಡ ಹೇರಲಾಗುತ್ತಿದೆ. ಆದರೆ, ಇಂತಹ ಒತ್ತಡಗಳಿಗೆ ಕಾಂಗ್ರೆಸ್ ಪಕ್ಷ ಬಗ್ಗುವುದಿಲ್ಲ ಎಂದು ಗುಡುಗಿದ್ದಾರೆ.
ಸಿಎಂ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಡಿ.ಕೆ.ಶಿವಕುಮಾರ್, ಸೂಕ್ತ ಸಮಯದಲ್ಲಿ ಸೂಕ್ತ ಉತ್ತರ ನೀಡುತ್ತೇನೆ.ಸದ್ಯಕ್ಕೆ ಯಾವುದೇ ಹೇಳಿಕೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.