Webdunia - Bharat's app for daily news and videos

Install App

ಭ್ರಷ್ಟ ಅಧಿಕಾರಿಗಳಿಂದ 152 ಕೋಟಿ ರೂ. ಅಕ್ರಮ ಸಂಪತ್ತು ಪತ್ತೆ

Webdunia
ಶುಕ್ರವಾರ, 2 ಡಿಸೆಂಬರ್ 2016 (13:07 IST)
ಇಬ್ಬರು ಭ್ರಷ್ಟ ಅಧಿಕಾರಿಗಳು ಮತ್ತು ಇಬ್ಬರು ಗುತ್ತಿಗೆದಾರರು 152 ಕೋಟಿ ರೂ. ಅಕ್ರಮ ಸಂಪತ್ತು ಹೊಂದಿರುವುದು ಬಹಿರಂಗವಾಗಿದೆ ಎಂದು ಆದಾಯ ತೆರಿಗೆ ಅಧಿಕಾರಿಗಳು ಹೇಳಿದ್ದಾರೆ.

ಕೋಟಿ ಕೋಟಿ ಹಣ, ಚಿನ್ನದ ಗಟ್ಟಿ, ಬೇನಾಮಿ ಆಸ್ತಿ ಸೇರಿದಂತೆ ಒಟ್ಟು 152 ಕೋಟಿ ರೂಪಾಯಿ ಮೌಲ್ಯದ ಸಂಪತ್ತು ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.
 
ಆದಾಯ ತೆರಿಗೆ ಅಧಿಕಾರಿಗಳು ಇಬ್ಬರು ಅಧಿಕಾರಿಗಳು ಮತ್ತು ಇಬ್ಬರು ಗುತ್ತಿಗೆದಾರರ ಮನೆಯ ಮೇಲೆ ದಾಳಿ ಮಾಡಿದಾಗ 6 ಕೋಟಿಗೂ ಹೆಚ್ಚು ನಗದು ಹಣ, 14 ಕೆಜಿ ಚಿನ್ನ, 40 ಕೋಟಿ ಮೌಲ್ಯದ ಕಾರುಗಳು ಪತ್ತೆಯಾಗಿದ್ದವು.
 
ಮನೆಯಲ್ಲಿದ್ದ ದಾಖಲೆಗಳನ್ನು ಆದಾಯ ತೆರಿಗೆ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ನಾಲ್ವರು ಭ್ರಷ್ಟ ತಿಮಿಂಗಿಲುಗಳು 152 ಕೋಟಿ ರೂಪಾಯಿಗೂ ಹೆಚ್ಚಿನ ಮೌಲ್ಯದ ಆಸ್ತಿ ಹೊಂದಿರುವುದು ವಿಚಾರಣೆಯಲ್ಲಿ ಬಾಯಿ ಬಿಟ್ಟಿದ್ದಾರೆ.
 
ತಮಿಳುನಾಡಿನ ಈರೋಡ್‌ ಜಿಲ್ಲೆಯಲ್ಲಿರುವ ಬ್ಯಾಂಕ್‌ನಿಂದ 2000 ಮುಖಬೆಲೆಯ 4.7 ಕೋಟಿ ರೂಪಾಯಿ ನಗದು ಹಣವನ್ನು ಡ್ರಾ ಮಾಡಲಾಗಿತ್ತು ಎಂದು ಆದಾಯ ತೆರಿಗೆ ಅಧಿಕಾರಿಗಳು ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ನಾವೆಲ್ಲಾ ಇರ್ತೀವಿ, ಹೋಗ್ತೀವಿ ದೇಶದ ಭದ್ರತೆ ಎಲ್ಲಕ್ಕಿಂತ ಮುಖ್ಯ: ಮಲ್ಲಿಕಾರ್ಜುನ ಖರ್ಗೆ

Indian Navy: ನಾವು ರೆಡಿ ಎಂದು ಕ್ಷಿಪಿಣಿ ಹಾರಿಸಿ ಪಾಕಿಸ್ತಾನಕ್ಕೆ ಠಕ್ಕರ್ ಕೊಟ್ಟ ಭಾರತೀಯ ನೌಕಾ ಸೇನೆ

ಸಿದ್ದರಾಮಯ್ಯನವರ ಅಲ್ಪ ಸಂಖ್ಯಾತರ ಮೇಲಿನ ಪ್ರೀತಿ ಗೊತ್ತು ಬಿಡಿ: ಬಿವೈ ವಿಜಯೇಂದ್ರ

ಬಾಂಬ್ ಸುಮ್ನೇ ಇಟ್ಕೊಂಡಿಲ್ಲ, ನೀರು ಕೊಡದಿದ್ರೆ ಪರಮಾಣು ಬಾಂಬ್ ಹಾಕ್ತೀವಿ: ಭಾರತಕ್ಕೆ ಎಚ್ಚರಿಕೆ ನೀಡಿದ ಪಾಕಿಸ್ತಾನ

ಪಾಕಿಸ್ತಾನ ಜೊತೆ ಯುದ್ಧ ಬೇಡ ಅಂತ ಹೇಳಿಲ್ಲ: ವಿವಾದವಾಗುತ್ತಿದ್ದಂತೇ ಉಲ್ಟಾ ಹೊಡೆದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments