Publish Date: Tue, 08 May 2018 (16:15 IST)
Updated Date: Tue, 08 May 2018 (16:17 IST)
ಸಿಎಂ ಸಿದ್ದರಾಮಯ್ಯ ಅವರ ಆಪ್ತ ಸಿಎಂ ಇಬ್ರಾಹಿಂ ವಾಸ್ತವ್ಯ ಹೂಡಿದ ನಗರದ ಕೃಷ್ಣಾ ಹೆರಿಟೇಜ್ ರೆಸಾರ್ಟ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್‌ನ ಆನಂದ್ ಸಿಂಗ್ ಒಡೆತನಕ್ಕೆ ಸೇರಿದ ರೆಸಾರ್ಟ್ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು ದಾಳಿ ವೇಳೆ ಲಕ್ಷಾಂತರ ಹಣವನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಬಾಗಲಕೋಟೆ: ಸಿಎಂ ಸಿದ್ದರಾಮಯ್ಯ ಆಪ್ತ ಆನಂದ್ ಸಿಂಗ್ ಒಡೆತನದ ಕೃಷ್ಣ ಹೆರಿಟೇಜ್ ಮೇಲೆ ಐಟಿ ದಾಳಿ ಪೂರ್ಣಗೊಂಡಿದೆ. ಸುಮಾರು ಒಂಭತ್ತು ಗಂಟೆಗಳ ಕಾಲ ದಾಖಲೆ ಪರಿಶೀಲಿಸಿದ ಅಧಿಕಾರಿಗಳು ರೆಸಾರ್ಟ್ನಲ್ಲಿದ್ದ ಲಕ್ಷಾಂತರ ಹಣವನ್ನು ವಶಕ್ಕೆ ಪಡೆದಿದ್ದಾರೆ.
ಐಟಿ ದಾಳಿ ಮುಗಿದಿದ್ದು, ಕೆಲ ಕಾಂಗ್ರೆಸ್ ಮುಖಂಡರ ಬಳಿ ಇದ್ದ ಲಕ್ಷಾಂತರ ಹಣವನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ ಅನೇಕ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ನಿನ್ನೆ ತಡರಾತ್ರಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಐಟಿ ಇಲಾಖೆ ಜಂಟಿ ನಿರ್ದೇಶಕರ ನೇತೃತ್ವದಲ್ಲಿ ಸುಮಾರು 10 ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಶೋಧ ಕಾರ್ಯ ನಡೆಸಿದರು. ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಸಿಎಂ ಸಿದ್ದರಾಮಯ್ಯ ಎರಡು ದಿನಗಳ ಹಿಂದಷ್ಟೇ ಇದೇ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿದ್ದರು.ಒಟ್ಟಿನಲ್ಲಿ ಈ ಐಟಿ ದಾಳಿ ಸಾರ್ವಜನಿಕ ವಲಯದಲ್ಲಿ ಕೂತುಹಲಕ್ಕೆ ಎಡೆಮಾಡಿಕೊಟ್ಟಿದ್ದು,ಐಟಿ ದಾಳಿ ಸಿಎಂ ಗೆ ಕಂಟಕವಾಗುತ್ತಾ ಎಂದು ಕಾದು ನೋಡಬೇಕಿದೆ.