Webdunia - Bharat's app for daily news and videos

Install App

ಬಾದಾಮಿ ಪ್ರತಿಷ್ಠಿತ ರೆಸಾರ್ಟ್‌ ಮೇಲೆ ಐಟಿ ದಾಳಿ

Webdunia
ಮಂಗಳವಾರ, 8 ಮೇ 2018 (16:15 IST)
ಸಿಎಂ ಸಿದ್ದರಾಮಯ್ಯ ಅವರ ಆಪ್ತ ಸಿಎಂ ಇಬ್ರಾಹಿಂ ವಾಸ್ತವ್ಯ ಹೂಡಿದ ನಗರದ ಕೃಷ್ಣಾ ಹೆರಿಟೇಜ್ ರೆಸಾರ್ಟ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್‌ನ ಆನಂದ್ ಸಿಂಗ್ ಒಡೆತನಕ್ಕೆ ಸೇರಿದ ರೆಸಾರ್ಟ್ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು ದಾಳಿ ವೇಳೆ ಲಕ್ಷಾಂತರ ಹಣವನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. 
 
ಬಾಗಲಕೋಟೆ:  ಸಿಎಂ ಸಿದ್ದರಾಮಯ್ಯ ಆಪ್ತ ಆನಂದ್​ ಸಿಂಗ್​ ಒಡೆತನದ ಕೃಷ್ಣ ಹೆರಿಟೇಜ್​ ಮೇಲೆ ಐಟಿ ದಾಳಿ ಪೂರ್ಣಗೊಂಡಿದೆ. ಸುಮಾರು ಒಂಭತ್ತು ಗಂಟೆಗಳ ಕಾಲ ದಾಖಲೆ ಪರಿಶೀಲಿಸಿದ ಅಧಿಕಾರಿಗಳು ರೆಸಾರ್ಟ್​ನಲ್ಲಿದ್ದ ಲಕ್ಷಾಂತರ ಹಣವನ್ನು ವಶಕ್ಕೆ ಪಡೆದಿದ್ದಾರೆ.
 
ಐಟಿ ದಾಳಿ ಮುಗಿದಿದ್ದು, ಕೆಲ ಕಾಂಗ್ರೆಸ್ ಮುಖಂಡರ ಬಳಿ ಇದ್ದ ಲಕ್ಷಾಂತರ ಹಣವನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ ಅನೇಕ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
 
ನಿನ್ನೆ ತಡರಾತ್ರಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಐಟಿ ಇಲಾಖೆ ಜಂಟಿ ನಿರ್ದೇಶಕರ ನೇತೃತ್ವದಲ್ಲಿ ಸುಮಾರು 10 ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಶೋಧ ಕಾರ್ಯ ನಡೆಸಿದರು. ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಸಿಎಂ ಸಿದ್ದರಾಮಯ್ಯ ಎರಡು ದಿನಗಳ ಹಿಂದಷ್ಟೇ ಇದೇ ರೆಸಾರ್ಟ್​​ನಲ್ಲಿ ವಾಸ್ತವ್ಯ ಹೂಡಿದ್ದರು.ಒಟ್ಟಿನಲ್ಲಿ ಈ ಐಟಿ ದಾಳಿ ಸಾರ್ವಜನಿಕ ವಲಯದಲ್ಲಿ ಕೂತುಹಲಕ್ಕೆ ಎಡೆಮಾಡಿಕೊಟ್ಟಿದ್ದು,ಐಟಿ ದಾಳಿ ಸಿಎಂ ಗೆ ಕಂಟಕವಾಗುತ್ತಾ ಎಂದು ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments