ಕಾಂಗ್ರೆಸ್ ನಾಯಕರ ಮನೆ ಮೇಲೆ ಐಟಿ ದಾಳಿ!

Webdunia
ಗುರುವಾರ, 19 ಜನವರಿ 2017 (11:49 IST)
ಇಂದು ಬೆಳ್ಳಂಬೆಳಗ್ಗೆ ಕುಂದಾನಗರಿ ಬೆಳಗಾವಿಯ ಕಾಂಗ್ರೆಸ್ ನಾಯಕರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
 
ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬಾಳ್ಕರ್ ಹಾಗೂ ಕಾಂಗ್ರೆಸ್ ಮುಖಂಡ ರಮೇಶ್ ಜಾರಕಿಹೊಳಿ ಮನೆಯ ಮೇಲೆ ಐಟಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. 
 
ಬೆಳಗಾವಿಯ ಕುವೆಂಪು ನಗರದಲ್ಲಿರುವ ಲಕ್ಷ್ಮೀ ಹೆಬಾಳ್ಕರ್ ಹಾಗೂ ಗೋಕಾಕ ಪಟ್ಟದಲ್ಲಿರುವ ಜಾರಕಿಹೊಳಿ ಅವರ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೂಲಗಳ ಪ್ರಕಾರ ಐಟಿ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ಕುರಿತು ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. 
 
500, 1000 ಮುಖಬೆಲೆಯ ನೋಟ್ ಬ್ಯಾನ್ ಬಳಿಕ ದೇಶಾದ್ಯಂತ ಐಟಿ ಅಧಿಕಾರಿಗಳು ಸಂಚಲನ ಮೂಡಿಸುತ್ತಿದ್ದು, ಇಂದು ಮುಂಜಾನೆ ಕುಂದಾನಗರಿಯ ಕಾಂಗ್ರೆಸ್ ನಾಯಕರಿಗೆ ಬಿಸಿ ಮುಟ್ಟಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸಿಎಂ ಬದಲಾವಣೆಗೆ ಹೊರಟ ಕಾಂಗ್ರೆಸ್ ಹೈಕಮಾಂಡ್ ಗೆ ಎದುರಾಗಿದೆ ದೊಡ್ಡ ಶಾಕ್

ಡಿಕೆ ಶಿವಕುಮಾರ್ ಪ್ರಮಾಣ ವಚನ ದಿನ ಫಿಕ್ಸ್: ಈ ದಿನಕ್ಕಿದೆ ವಿಶೇಷ

ಬ್ಯಾಗ್ ಎಗರಿಸಲು ಬಂದ ಖದೀಮರು.. ಯಾಕಾದ್ರೂ ಹೋದೆವೋ ಎನ್ನುವಂತೆ ಗುನ್ನಾ ಕೊಟ್ಟ ಯುವತಿ Video

Video: ಜೋಡೆತ್ತು ಎಂದರೆ ಹೀಗಿರಬೇಕು.. ಜೊತೆಗಾರ ಎತ್ತು ಸತ್ತಿದ್ದಕ್ಕೆ ಜೋಡಿ ಎತ್ತು ಮಾಡಿದ್ದು ನೋಡಿದ್ರೆ ಕಣ್ಣೀರು ಬರುತ್ತೆ

ಡಿಕೆ ಶಿವಕುಮಾರ್ ಪಾಲಿಗೆ ಇಂದು ಮಹತ್ವದ ದಿನ

ಮುಂದಿನ ಸುದ್ದಿ
Show comments