ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

Sampriya
ಸೋಮವಾರ, 19 ಮೇ 2025 (18:05 IST)
ಚಿಕ್ಕಮಗಳೂರು: ರಾಜ್ಯದಲ್ಲಿ ಯುದ್ಧದ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾಗ, ರಾಜ್ಯದ ಜನರು ಬೆಲೆ ಏರಿಕೆಯ ಬಿಸಿಯಿಂದ ಕಂಗೇಟ್ಟಿರುವಾಗ ಯಾವ ಸಾಧನೆಗೆ  ರಾಜ್ಯ ಸರ್ಕಾರ ಸಾಧನಾ ಸಮಾವೇಶ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಪ್ರಶ್ನೆ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು, ಬಾಣಂತಿಯರು ಮತ್ತು ಪ್ರಾಮಾಣಿಕ ಅಧಿಕಾರಿಗಳ ಸಮಾಧಿಗಳ ಮೇಲೆ ರಾಜ್ಯ ಸರ್ಕಾರ ಸಾಧನಾ ಸಮಾವೇಶ ನಡೆಸಲು ಹೊರಟಿದೆ ಎಂದು ಕಿಡಿಕಾರಿದರು.

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ. ಕಳೆದ ಎರಡು ವರ್ಷಗಳಲ್ಲಿ, ಸುಮಾರು 2,000 ರೈತರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ, 'ಶೇಕಡಾ 60 ಕಮಿಷನ್ ಸರ್ಕಾರ' ಪ್ರಾಮಾಣಿಕ ಅಧಿಕಾರಿಗಳನ್ನು ತಮ್ಮ ಪ್ರಾಣವನ್ನೇ ಕಳೆದುಕೊಳ್ಳುವಂತೆ ಮಾಡುತ್ತಿದೆ. ಮೂರನೇ ಬಾರಿಗೆ ಬಿಯರ್ ದರ ಹೆಚ್ಚಾಗಿದೆ. ಖಜಾನೆ ಖಾಲಿಯಾಗಿದ್ದು, ನೌಕರರಿಗೆ ಸಂಬಳ ಕೊಡಲಾಗುತ್ತಿಲ್ಲ. ಮದ್ಯದ ದರ ಹೆಚ್ಚಳ ಆಗಿರುವುದರಿಂದ ಕಳ್ಳತನ ಹೆಚ್ಚಾಗಲಿದೆ‌.

ಜನೌಷಧಿ ಯೋಜನೆಗೆ ಎಳ್ಳು ನೀರು ಹಾಕಿದೆ. ಎರಡು ವರ್ಷ ತುಂಬುತ್ತಿರುವ ಬೇಜವಬ್ದಾರಿ ಸರ್ಕಾರ ಇದು ಎಂದು ವಾಗ್ದಾಳಿ ನಡೆಸಿದರು.

ಎರಡು ವರ್ಷಗಳ ಸರ್ಕಾರದ ಸಾಧನೆ ಏನು, ಯಾವುದಾದರೂ ಅಣೆಕಟ್ಟೆ ಕಟ್ಟಿದ್ದಾರಾ, ಕಟ್ಟಿರುವ ಅಣೆಕಟ್ಟೆಯ ಎತ್ತರ ಜಾಸ್ತಿ ಮಾಡಿದ್ದಾರಾ, ಗೇಟ್ ರಿಪೇರಿ ಸಾಧ್ಯವಾಗಿಲ್ಲ. ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ' ಎಂದು ಪ್ರಶ್ನಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

ದಿಢೀರನೇ ತುಮಕೂರು ಪ್ರವಾಸವನ್ನು ರದ್ದು ಮಾಡಿದ ಸಿಎಂ, ಇದೇ ಕಾರಣ

ಮುಂದಿನ ಸುದ್ದಿ
Show comments