Select Your Language

Notifications

webdunia
webdunia
webdunia
webdunia

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

Deputy Chief Minister DK Shivakumar, Chief Minister Siddaramaiah, KPTCL Employees Union

Sampriya

ಬೆಂಗಳೂರು , ಬುಧವಾರ, 18 ಜೂನ್ 2025 (18:53 IST)
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಮತ್ತೆ ಮುಖ್ಯಮಂತ್ರಿ ಸ್ಥಾನದ ಆಸೆಯನ್ನು ಪರೋಕ್ಷವಾಗಿ ವ್ಯಕ್ತಪಡಿದರು. 

ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೆಪಿಟಿಸಿಎಲ್ ನೌಕರರ ಸಂಘದ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಈ ರೀತಿಯ ಆಸೆಯನ್ನು ವ್ಯಕ್ತಪಡಿಸಿದರು. ಶಿವಕುಮಾರ್ ಭಾಷಣ ಮಾಡಲು ಬಂದ ಕೂಡಲೇ ವಿದ್ಯುತ್ ಇಲಾಖೆ ಸಿಬ್ಬಂದಿಗಳು, ನೌಕರರು ಡಿಕೆ ಡಿಕೆ ಅಂತ ಘೋಷಣೆ ಕೂಗಿದರು.

ಇದಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ್ ಈಗ ಡಿಕೆ ಡಿಕೆ ಅನ್ನೋದು ಅಲ್ಲ. ಎಲೆಕ್ಷನ್‌‌ನಲ್ಲಿ ಇನ್ನೊಂದು ಸಾರಿ ಡಿಕೆ ಶಿವಕುಮಾರ್ ತಂದು ಕೂರಿಸಿದ ಮೇಲೆ ಈ ಘೋಷಣೆ ಕೂಗಿ. ಅದಕ್ಕೆ ನೀವು ಶಕ್ತಿ ಕೊಡಬೇಕು ಎಂಬ ಮನವಿ ಮಾಡಿದರು. 

ನೀವು ಮನಸ್ಸು ಮಾಡಿದ್ರೆ ಡಿಕೆ ಶಿವಕುಮಾರ್‌ನನ್ನು ಮೇಲಕ್ಕೆ ಎತ್ತಬಹುದು. ಕೆಳಗೆ ಇಳಿಸಬಹುದು. ಅಷ್ಟು ಶಕ್ತಿ ನಿಮಗೆ ಇದೆ. ನಾವು ನಿಮಗೆ ಎಲ್ಲಾ ಮಾಡಿದ್ದೇವೆ. ನಿಮಗೆ ನಮ್ಮ ಮೇಲೆ ಉಪಕಾರ ಸ್ಮರಣೆ ಇರಬೇಕು. ಬರೀ ಡಿಕೆ ಡಿಕೆ ಅನ್ನೋದಲ್ಲ. ಈ ಸರ್ಕಾರವನ್ನು ತಂದು ಕೂರಿಸಬೇಕು ಎನ್ನುವ ಮೂಲಕ ಸಿಎಂ ಸ್ಥಾನಕ್ಕೆ ಆಶೀರ್ವಾದ ಮಾಡಬೇಕೆಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ನಂದಿಬೆಟ್ಟದಿಂದ ಸಚಿವ ಸಂಪುಟ ಸಭೆ ವಿಧಾನಸೌಧಕ್ಕೆ ಶಿಫ್ಟ್: ಮಾವು ಬೆಳೆಗಾರರ ಕೋಪಕ್ಕೆ ಹೆದರಿದ ಸರ್ಕಾರ