Select Your Language

Notifications

webdunia
webdunia
webdunia
webdunia

ಐಟಿಐ ಪಾಸಾದವರಿಗೆ ಆಕ್ಸಿಜನ್‌ ಘಟಕಗಳ ನಿರ್ವಹಣೆ: ಡಿಸಿಎಂ

ಐಟಿಐ ಪಾಸಾದವರಿಗೆ ಆಕ್ಸಿಜನ್‌ ಘಟಕಗಳ ನಿರ್ವಹಣೆ: ಡಿಸಿಎಂ
bengaluru , ಗುರುವಾರ, 22 ಜುಲೈ 2021 (14:52 IST)
ಬೆಂಗಳೂರು: ಜಿಲ್ಲಾ, ತಾಲೂಕು ಆಸ್ಪತ್ರೆಗಳು ಸೇರಿದಂತೆ ಸಮುದಾಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಆಮ್ಲಜನಕ ಉತ್ಪಾದಕ ಘಟಕಗಳನ್ನು ಸ್ಥಾಪಿಸಲಾಗುತ್ತಿದ್ದು, ಅವುಗಳ ನಿರ್ವಹಣೆ ಮತ್ತು ಕಾರ್ಯಾಚರಣೆಗೆ ಐಟಿಐ ವಿದ್ಯಾರ್ಥಿಗಳನ್ನೇ ನೇಮಕ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.
ಬೆಂಗಳೂರಿನಲ್ಲಿ ಗುರುವಾರ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಐಟಿಐನಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಆಕ್ಸಿಜನ್‌ ಘಟಕಗಳ ನಿರ್ವಹಣೆ-ಕಾರ್ಯಾಚರಣೆ ಕುರಿತ ವರ್ಚು
ಯೆಲ್ ಆನ್‌ಲೈನ್‌ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಈಗಾಗಲೇ ರಾಜ್ಯದ ಪ್ರತಿಯೊಂದು ಆಸ್ಪತ್ರೆಯಲ್ಲಿ ಆಕ್ಸಿಜನ್‌ ಘಟಕಗಳನ್ನು ಸ್ಥಾಪನೆ ಮಾಡಲು ನಿರ್ಧರಿಸಲಾಗಿದೆ. ಇದುವರೆಗೆ 350 ಘಟಕಗಳನ್ನು ಅಳವಡಿಸಲಾಗಿದೆ. ಇವುಗಳ ನಿರ್ವಹಣೆಯ ಹೊಣೆಯನ್ನು ಐಟಿಐ ವಿದ್ಯಾರ್ಥಿಗಳಿಗೆ ವಹಿಸುವುದು ಉತ್ತಮ ಎಂದು ಅವರು ಹೇಳಿದರು.
ರಾಜ್ಯದಲ್ಲಿ ಹಳೆಯ ಸ್ಥಿತಿಯಲ್ಲಿರುವ 150 ಐಟಿಐಗಳನ್ನು ಉನ್ನತೀಕರಣ ಮಾಡಲು ಟಾಟಾ ಟೆಕ್ನಾಲಜೀಸ್‌ ಜತೆ ಸರಕಾರ ಒಡಂಬಡಿಕೆ ಮಾಡಿಕೊಂಡಿದೆ. ಹೀಗಾಗಿ ಇನ್ನು ಮುಂದೆ ಐಟಿಐ ವಿದ್ಯಾರ್ಥಿಗಳು ಆಕ್ಸಿಜನ್‌ ಘಟಕಗಳನ್ನು ನಿರ್ವಹಿಸುವುದು ಮಾತ್ರವಲ್ಲ, ಆಕ್ಸಿಜನ್‌ ತಯಾರಿಕಾ ಯಂತ್ರಗಳನ್ನು ತಯಾರಿಸುವ ಕುಶಲತೆಯನ್ನು ಬೆಳೆಸಿಕೊಳ್ಳಬೇಕು ಎಂದು ಡಿಸಿಎಂ ಸಲಹೆ ಮಾಡಿದರು.
ಕೇಂದ್ರ ಸರಕಾರದ ತರಬೇತಿ ಮಹಾ ನಿರ್ದೇಶನಾಲಯ ಕೈಗೊಂಡಿರುವ ಈ ತರಬೇತಿ ಕಾರ್ಯಕ್ರಮ ಅತ್ಯುತ್ತಮ ಕ್ರಮವಾಗಿದೆ ಎಂದ ಡಿಸಿಎಂ ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಭಜನಾ ಮಂದಿರದ ಕಾಣಿಕೆ ಡಬ್ಬಿಗೆ ಕನ್ನ!