Select Your Language

Notifications

webdunia
webdunia
webdunia
webdunia

ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ ಅಧ್ಯಕ್ಷರಾಗಿ ಜಫರುಲ್ಲಾ ಪದಗ್ರಹಣ

ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ ಅಧ್ಯಕ್ಷರಾಗಿ ಜಫರುಲ್ಲಾ ಪದಗ್ರಹಣ
ಬೆಂಗಳೂರು , ಶುಕ್ರವಾರ, 1 ಮಾರ್ಚ್ 2019 (17:14 IST)
ರಾಜ್ಯ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ ನಿಯಮಿತದ ನೂತನ ಅಧ್ಯಕ್ಷರಾಗಿ ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಜಫರುಲ್ಲಾ ಖಾನ್ ಅಧಿಕಾರ ಸ್ವೀಕರಿಸಿದರು.

ಬೆಂಗಳೂರು ನಗರದ ವಿಶ್ವೇಶರಯ್ಯ ಗೋಪುರದಲ್ಲಿರುವ ಕಚೇರಿಯಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಜಫರುಲ್ಲಾ ಖಾನ್,ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ‌ ತಮಗೆ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷ ಸ್ಥಾನ ನೀಡಿದೆ. ತಮಗೆ ನೀಡಿರುವ ಜವಾಬ್ದಾರಿಯನ್ನು ಪ್ರಾಮಾಣಿಕ ನಿಷ್ಠೆಯಿಂದ ನಿರ್ವಹಿಸುತ್ತೇನೆ.

ಎಲ್ಲಾ ವರ್ಗದ ಜನರಿಗೆ  ಅನುಕೂಲವಾಗುವ ರೀತಿಯಲ್ಲಿ ಕೆಲಸಮಾಡುತ್ತೇನೆ. ನಿಗಮದಲ್ಲಿ   ಒಂದುವೇಳೆ  ತಪ್ಪುಗಳು  ಕಂಡುಬಂದಲ್ಲಿ  ಅವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುತ್ತೇನೆ ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ರೋಷನ್ ಬೇಗ್ ಸೇರಿದಂತೆ ಜೆಡಿಎಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.



Share this Story:

Follow Webdunia kannada

ಮುಂದಿನ ಸುದ್ದಿ

ಪ್ರೀತಿ ಮಾಡೋಕೆ ಒಲ್ಲೆ ಎಂದವಳಿಗೆ ಬೆಂಕಿ ಇಟ್ಟೆಬಿಟ್ಟ ಕಿರಾತಕ!