Select Your Language

Notifications

webdunia
webdunia
webdunia
webdunia

ಹೆಚ್.ಡಿ.ಕುಮಾರಸ್ವಾಮಿಗೆ ವಚನಭ್ರಷ್ಟ ಎಂದ ಜಗದೀಶ್ ಶೆಟ್ಟರ್

ಜಗದೀಶ್ ಶೆಟ್ಟರ್
ಹುಬ್ಬಳ್ಳಿ , ಭಾನುವಾರ, 8 ಜುಲೈ 2018 (14:43 IST)
ರಾಜ್ಯದ ರೈತರ ಸಂಪೂರ್ಣ ಸಾಲ ಮನ್ನಾ ಮಾಡದೇ ಸಿಎಂ ಕುಮಾರಸ್ವಾಮಿ ವಚನ ಭ್ರಷ್ಟರಾಗಿದ್ದಾರೆ ಎಂದು ಮಾಜಿ ಸಿಎಂ ದೂರಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ ಶೆಟ್ಟರ್ ಈ ಹೇಳಿಕೆ ನೀಡಿದ್ದಾರೆ.

ಸಿಎಂ ಕುಮಾರಸ್ವಾಮಿ ಚುನಾವಣೆ ಮುಂಚೆ ಭರವಸೆ ನೀಡಿದ್ರು, ಆದರೆ ನೀಡಿದ ಭರವಸೆಯನ್ನು ಸಂಪೂರ್ಣವಾಗಿ ಈಡೇರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈತ್ರಿ ಸರ್ಕಾರ ಬಹಳ ವರ್ಷ ನಡೆಯುವದಿಲ್ಲವೆಂದು ಮಾಜಿ ಸಿಎಂ ಭವಿಷ್ಯ ನುಡಿದರು.
ಸಾಲಮನ್ನಾದಿಂದ ರೈತರಿಗೆ ಲಾಭವಾಗಿಲ್ಲ‌. ಇದರಿಂದ ಸಾಕಷ್ಟು ರೈತರಿಗೆ ಅನ್ಯಾಯವಾಗಿದೆ.

ಉಚಿತ ಬಸ್ ಪಾಸ್ ವಿಷಯದಲ್ಲಿ   ಸಿಎಂ ಕುಮಾರಸ್ವಾಮಿ ಮೌನಕ್ಕೆ ಜಾರಿದ್ದಾರೆ. ಶಾಂತಿಯುತ ಪ್ರತಿಭಟನೆ ಮಾಡ್ತಾಯಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಚ್ ಮಾಡಿಸಿದ್ದಾರೆ. ಸರ್ಕಾರ ಪೊಲೀಸರಿಂದ ಅನಾಚಾರ, ಅತ್ಯಾಚಾರ ಮಾಡಿಸಿದ್ದಾರೆಂದು ಆರೋಪ ಮಾಡಿದರು. ವಿದ್ಯಾರ್ಥಿಗಳಿಗೆ ಮೇಲೆ ಲಾಠಿ ಚಾರ್ಚ್ ಆಗಿರೋದನ್ನು ಖಂಡಿಸುತ್ತೇನೆ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮದುವೆ ಮಂಟಪದಿಂದ ವಧು ಪರಾರಿ